ಬಂಟ್ವಾಳ

ಸರಕಾರಿ ಶಾಲೆ ಉಳಿಸಿ ರಥಯಾತ್ರೆಗೆ ಚಾಲನೆ

ಸರಕಾರಿ ಶಾಲೆ ಉಳಿಸಿ ಅಭಿಯಾನದ ಅಂಗವಾಗಿ  ಸೆ. 8 ರಂದು  ಬೆಂಗಳೂರಿನಲ್ಲಿ ನಡೆಯಲಿರುವ ಕಾಲ್ನಡಿಗೆ ಜಾಥಕ್ಕೆ  ಪೂರ್ವಭಾವಿಯಾಗಿ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ವತಿಯಿಂದ ರಾಜ್ಯದ್ಯಂತ ಸಂಚರಿಸಲಿರುವ ರಥಯಾತ್ರೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ಬಂಟ್ವಾಳ ಬಡ್ಡಕಟ್ಟೆಯ ಹನುಮಾನ್ ದೇವಸ್ಥಾನದ ಬಳಿ ಬುಧವಾರ ಬೆಳಿಗ್ಗೆ  ಚಾಲನೆ ನೀಡಿದರು.

ಜಾಹೀರಾತು

ಕರೆಂಕಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ  ಆರಂಭಗೊಂಡ ರಥಯಾತ್ರೆಗೆ ಬಡ್ಡಕಟ್ಟೆಯಲ್ಲಿ ಸಾರ್ವಜನಿಕರು ಹಾಗೂ ಶಿಕ್ಷಣ ಪ್ರೇಮಿಗಳು ಸಾಥ್ ನೀಡಿ ಬಂಟ್ವಾಳ ಪೇಟೆ ಮೂಲಕ ಬೈಪಾಸ್ ವರೆಗೆ ಕಾಲ್ನಡಿಗೆ ಮೂಲಕ ಆಗಮಿಸಿ ಬೀಳ್ಕೊಟ್ಟರು. ಈ ಸಂದರ್ಭ ಶಾಸಕ ರಾಜೇಶ್ ನಾಯಕ್ ಅವರು ಮಾತನಾಡಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ದಡ್ಡಲಕಾಡು ಸರಕಾರಿ ಶಾಲೆಯನ್ನು ರಾಜ್ಯದಲ್ಲೇ ಮಾದರಿ ಶಾಲೆಯನ್ನಾಗಿ ರೂಪಿಸಿದೆ. ಇಂತಹ ಮಾದರಿ ಶಾಲೆ ರಾಜ್ಯದ ಎಲ್ಲಾ ಗ್ರಾಮಗಳಲ್ಲೂ ನಿರ್ಮಾಣವಾಗ ಬೇಕು. ಈ ಬಗ್ಗೆ ವಿಧಾನಸೌಧದಲ್ಲೂ ಧ್ವನಿ ಎತ್ತುವುದಾಗಿ ಅವರು ತಿಳಿಸಿದರು.

ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಜಿ.ಆನಂದ, ದಿನೇಶ್ ಭಂಡಾರಿ, ದೇವದಾಸ ಶೆಟ್ಟಿ, ಸೀತರಾಮ ಪೂಜಾರಿ, ನಾಗೇಶ್ ಸಾಲ್ಯಾನ್, ಪದ್ಮನಾಭ ಪೂಜಾರಿ ಕೇಲ್ದೋಡಿ, ಆನಂದ ಕೋಟ್ಯಾನ್, ಲಕ್ಷ್ಮೀನಾರಾಯಣ ಗೌಡ, ದಿನೇಶ್ ರಾಯಿ, ರಮನಾಥ ಪೈ, ಮೀನಕ್ಷಿ ಗೌಡ, ಸೀತರಾಮ ಕೆ. ರಾಮಚಂದ್ರ ಪೂಜಾರಿ, ಪೂವಪ್ಪ ಮೆಂಡನ್, ಧರ್ಣಪ್ಪ ಪೂಜಾರಿ, ಪುರುಷೋತ್ತಮ ಅಂಚನ್, ಶೇಖರ್ ಅಂಚನ್ ಮತ್ತಿತರರು ಹಾಜರಿದ್ದರು. ಬಳಿಕ ರಾಯಿ, ಸಿದ್ದಕಟ್ಟೆಯ ಮೂಲಕ ರಥಯಾತ್ರೆ ಮೂಡಬಿದಿರೆಯತ್ತ ಸಾಗಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.