ಬಂಟ್ವಾಳ

ಬೊಂಡಾಲ ಸಾರ್ವಜನಿಕ ಗಣೇಶೋತ್ಸವಕ್ಕೆ ಬೆಳ್ಳಿಹಬ್ಬದ ಸಂಭ್ರಮ

ಬೊಂಡಾಲದ ಯುವ ಸಂಗಮ ಸೇವಾ ಟ್ರಸ್ಟ್ ಆಯೋಜಿಸುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬದ ಸಂಭ್ರಮವನ್ನು ಆಚರಿಸುತ್ತಿದ್ದು, ಈ ಬಾರಿ ಶ್ರೀದೇವರಿಗೆ ರಜತ ಪ್ರಭಾವಳಿಯನ್ನು ಸಮರ್ಪಿಸಲಾಗುತ್ತದೆ. 13ರಿಂದ 15ರವರೆಗೆ ಕೀರ್ತಿಶೇಷ ಬೊಂಡಾಲ ಜಗನ್ನಾಥ ಶೆಟ್ಟಿ ವೇದಿಕೆ ಶೇಡಿಗುರಿಯ ಯುವ ಸಂಗಮ ಸಮುದಾಯ ಭವನದಲ್ಲಿ ನಾನಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗಣೇಶೋತ್ಸವ ನಡೆಯಲಿದೆ ಎಂದು ಯುವ ಸಂಗಮ ಸೇವಾ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಹೇಳಿದರು.

ಜಾಹೀರಾತು

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಸಂಗಮ ಟ್ರಸ್ಟ್ ೧೯೯೩ರಲ್ಲಿ ಕೀರ್ತಿಶೇಷ ಬೊಂಡಾಲ ಜಗನ್ನಾಥ ಶೆಟ್ಟಿ ಅವರ ಮುಂದಾಳತ್ವದಲ್ಲಿ ಊರಿನ ಹಿರಿಯರು ಮತ್ತು ಯುವಕರ ಸಹಭಾಗಿತ್ವದಲ್ಲಿ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿರುವುದಲ್ಲದೆ, ಸಾಮಾಜಿಕ ಕಾರ್ಯಕ್ರಮಗಳಾದ ರಕ್ತದಾನ ಶಿಬಿರ ಸಹಿತ ಹಲವು ಜನೋಪಯೋಗಿ ಸೇವಾ ಕೈಂಕರ್ಯಗಳನ್ನು ನಡೆಸುತ್ತಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ 25 ವರ್ಷಗಳಾಗುವ ಹಿನ್ನೆಲೆಯಲ್ಲಿ ಶ್ರೀ ದೇವರಿಗೆ ರಜತ ಪ್ರಭಾವಳಿ ಸಮರ್ಪಣೆ ನಡೆಯುತ್ತದೆ. 13ರಂದು ದೇವರ ಪ್ರತಿಷ್ಠಾಪನೆ, ರಜತ ಪ್ರಭಾವಳಿ ಸಮರ್ಪಣೆ ನಡೆಯಲಿದ್ದು, ರಾತ್ರಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಹಿಸುವರು. ಪ್ರತಿದಿನ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ೧೫ರಂದು ಶನಿವಾರ ಸಂಜೆ ೪ ಗಂಟೆಗೆ ಭವ್ಯ ಶೋಭಾಯಾತ್ರೆ ನಡೆಯಲಿದೆ ಎಂದು ವಿವರ ನೀಡಿದರು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೇಶವ ಅಂಚನ್ ಪದವು, ಸಂಚಾಲಕ ಯಶೋಧರ ಬಂಗೇರ ಕೊಲ್ಲೂರು, ಪ್ರಧಾನ ಕಾರ್ಯದರ್ಶಿ ಸುಧೀರ್ ನಿರ್ಮಲ್, ಯುವ ಸಂಗಮ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪಿ.ಕೇಶವ ನಾಯ್ಕ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

8 hours ago