ಬಂಟ್ವಾಳ

ಗಣೇಶೋತ್ಸವಕ್ಕೆ ನಿರ್ಬಂಧ ಹಿಂಪಡೆಯಲು ಹಿಂಜಾವೇ ಮನವಿ

ಹಿಂದು ಧರ್ಮದ ಪ್ರಮುಖ ಆಚರಣೆಗಳಲ್ಲಿ ಒಂದಾದ ಗಣೇಶೋತ್ಸವಕ್ಕೆ ಹಲವು ನಿಯಮ, ಕಟ್ಟುಪಾಡು, ನಿರ್ಬಂಧಗಳನ್ನು ಹೇರಿ ಧಾರ್ಮಿಕ ಹಕ್ಕಿನ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಈ ಕ್ರಮವನ್ನು ಖಂಡಿಸಿ ಹಿಂದು ಜಾಗರಣಾ ವೇದಿಕೆ ಬಂಟ್ವಾಳ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

ಜಾಹೀರಾತು

ಗಣೇಶೋತ್ಸವಕ್ಕೆ ವಿಧಿಸಿರುವ ನಿರ್ಬಂಧವನ್ನು ಹಿಂಪಡೆಯಬೇಕು ಎಂದು ಮನವಿಯಲ್ಲಿ ಹೇಳಲಾಗಿದೆ. ಹಿಂದೂ ವಿರೋಧಿ ಅಧಿಕಾರ ಶಾಹಿಗಳು ಈ ಹಬ್ಬವನ್ನು ಹತ್ತಿಕ್ಕಲು ಇಲ್ಲಸಲ್ಲದ ಅಡಚಣೆಗಳನ್ನು ಹೇರುತ್ತಿದ್ದು ರಾಷ್ಟ್ರೀಯ ಹಬ್ಬದ ವೈಭವವನ್ನು ಹಾಳು ಮಾಡಲು ಹೊರಟಿರುವುದು ಖಂಡನೀಯ. ವಿಧಿಸಿ ರುವ ಎಲ್ಲಾ ನಿರ್ಬಂಧ ಗಳನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಸಾರ್ವಜನಿಕ ಗಣೇಶೋತ್ಸವ ದ ಮೆರವಣಿಗೆಗೆ ಮುಕ್ತ ಅವಕಾಶವನ್ನು ಕಲ್ಲಿಸಬೇಕು ಮನವಿಯ ಮೂಲಕ ಒತ್ತಾಯಿಸಲಾಯಿತು. ಈ ಸಂದರ್ಭ ಹಿಂದು ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ್ಯ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ, ಜಿಲ್ಲಾ ಅಧ್ಯಕ್ಷ ರತ್ನಾಕರ ಶೆಟ್ಟಿ ಕಲ್ಲಡ್ಕ, ತಾಲೂಕು ಅದ್ಯಕ್ಷ ಚಂದ್ರ ಕಲಾಯಿ, ಮಹಿಳಾ ಘಟಕದ ಅದ್ಯಕ್ಷೆ ಬಬಿತಾ ಕೋಟ್ಯಾನ್,  ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ತಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಪ್ರಮುಖರಾದ ಶರಣ್ ಕಾಮಾಜೆ, ಬಾಲಕ್ರಷ್ಣ ಕಲಾಯಿ, ಮಚ್ವೇಂದ್ರನಾಥ ಸಾಲಿಯಾನ್, ಗಣೇಶ್ ಶೆಟ್ಟಿ ಕಲ್ಲಡ್ಕ ಮತ್ತಿತರರು ಉಪಸ್ಥಿತರಿದ್ದರು.

ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಕಮಲ್ ಪಂತ್ ಜಾರಿಗೊಳಿಸಿರುವ ಆದೇಶ ಧಾರ್ಮಿಕ ಹಕ್ಕಿನ ಮೇಲಿನ ದಬ್ಬಾಳಿಕೆ ಎಂದು ಹಿಂಜಾವೇ ಅಭಿಪ್ರಾಯಪಟ್ಟಿದೆ. ಡಸಾವಿರಾರಿ ವರ್ಷಗಳಿಂದ ಭಾರತದಲ್ಲಿ ಹಿಂದು ಧಾರ್ಮಿಕ ಹಬ್ಬಗಳ ಮೆರವಣಿಗೆಗಳು ಸೂಕ್ಷ್ಮಾತಿ ಸೂಕ್ಷ್ಮ ಪ್ರದೇಶಗಳಲ್ಲಿ ನಿರಾತಂಕವಾಗಿ ನಡೆದುಕೊಂಡು ಬರುತ್ತಿವೆ. ರಾಜ್ಯ ಸರಕಾರದ ಈ ಅನವಶ್ಯಕ ಹಿಂದು ವಿರೋಧಿ ಆದೇಶ ಖಂಡಿಸಿ ಪ್ರತಿಭಟನೆ ನಡೆಸಿವೆ ಎಂದು ಅಡ್ಯಂತಾಯ ಹೇಳಿದ್ದಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago