ಬಂಟ್ವಾಳ

14, 15ರಂದು ಸುರಿಬೈಲಿನಲ್ಲಿ ಮೈಸೂರು ವಿಭಾಗೀಯ ಪ್ರಾಥಮಿಕ, ಪ್ರೌಢಶಾಲಾ ಮಕ್ಕಳ ಕಬಡ್ಡಿ ಪಂದ್ಯಾಟ

ದಕ್ಷಿಣಕನ್ನಡ ಜಿಲ್ಲಾ ಪಂಚಾಯತು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ ಹಾಗೂ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಸುರಿಬೈಲು ಜಂಟಿ ಆಶ್ರಯದಲ್ಲಿ ಮೈಸೂರು ವಿಭಾಗೀಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕಬಡ್ಡಿ ಪಂದ್ಯಾಟವು ಸೆ.14 ಮತ್ತು ಸೆ.15ರಂದು ಸುರಿಬೈಲು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ.

ಮೈಸೂರು ವಿಭಾಗ ವ್ಯಾಪ್ತಿಯ 8 ಜಿಲ್ಲೆಗಳ 32 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳಲಿದ್ದು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ 600 ರಷ್ಟು ವಿದ್ಯಾರ್ಥಿಗಳು ಆಟಗಾರರಾಗಿ ಭಾಗವಹಿಸಲಿದ್ದಾರೆ. ಪಂದ್ಯಾಟದ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ವ್ಯಾಪಕ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಎನ್. ಮತ್ತು ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.14ರಂದು ಅಪರಾಹ್ನ 2ಗಂಟೆಗೆ ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಉದ್ಘಾಟಿಸುವರು. ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರವೇರಿಸುವರು.

ಜಿಲ್ಲಾ ಪಂಚಾಯತು ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಅಂಗಾರ ಎಸ್, ಡಾ. ವೈ ಭರತ್ ಶೆಟ್ಟಿ, ಹರೀಶ್ ಪೂಂಜ, ಸಂಜೀವ ಮಠಂದೂರು, ಉಮಾನಾಥ್ ಎ.ಕೋಟ್ಯಾನ್, ಡಿ.ವೇದವ್ಯಾಸ ಕಾಮತ್, ಐವನ್ ಡಿಸೋಜ, ಕೆ.ಪ್ರತಾಪ್‌ಚಂದ್ರ ಶೆಟ್ಟಿ, ಬಿ.ಎಂ.ಫಾರೂಕ್, ಕೆ.ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್.ಬೋಜೇಗೌಡ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಮರ್ ಆಳ್ವ, ವಿವಿಧ ಅಕಾಡೆಮಿಗಳ ಅಧ್ಯಕ್ಷರುಗಳಾದ ಎ.ಸಿ.ಭಂಡಾರಿ, ಆರ್.ಪಿ.ನಾಯ್ಕ, ಕರಂಬಾರು ಮಹಮ್ಮದ್, ಪಿ.ಸಿ.ಜಯರಾಮ, ಜಿಲ್ಲಾ ಪಂಚಾಯತು ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ತಾಲೂಕು ಪಂಚಾಯತು ಅಧ್ಯಕ್ಷ ಚಂದ್ರಹಾಸ ಕರ್ಕೆರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ, ಜಿ.ಪಂ.ಸದಸ್ಯ ಎಂ.ಎಸ್.ಮಹಮ್ಮದ್, ಕೊಳ್ನಾಡು ಗ್ರಾಮ ಪಂಚಾಯತು ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ತಾ.ಪ.ಸದಸ್ಯ ನಾರಾಯಣ ಶೆಟ್ಟಿ ಕುಲ್ಯಾರು, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಅಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸುವರು.

ಸೆ.15ರಂದು ಅಪರಾಹ್ನ 3 ಗಂಟೆಗೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಉಧ್ಯಮಿ ಹಾಜಿ ಬಶೀರ್ ಅಹಮ್ಮದ್ ಬಹುಮಾನ ವಿತರಿಸುವರು.

ಪಂದ್ಯಾಟದ ಯಶಸ್ವಿಗಾಗಿ ಮೈಸೂರು ವಿಭಾಗೀಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕಬಡ್ಡಿ ಪಂದ್ಯಾಟ ನಿರ್ವಹಣಾ ಸಮಿತಿ ರಚಿಸಲಾಗಿದ್ದು ಈಗಾಗಲೇ ಪೂರ್ವಭಾವಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಸಚಿವ ಯು.ಟಿ.ಖಾದರ್ ಗೌರವಾಧ್ಯಕ್ಷರು, ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅಧ್ಯಕ್ಷರಾಗಿರುವ ಸ್ವಾಗತ ಸಮಿತಿ, ಮಾಜಿ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷರಾಗಿರುವ ಆರ್ಥಿಕ ಸಮಿತಿ, ಎ.ಎಸ್.ಮಹಮ್ಮದ್, ಸುಭಾಶ್ಚಂದ್ರ ಶೆಟ್ಟಿ ಕುಳಾಲು ಸಂಚಾಲಕರುಗಳು, ಎಸ್.ಎಂ.ಅಬೂಬಕ್ಕರ್ ಕಾರ್‍ಯಾಧ್ಯಕ್ಷರಾಗಿರುವ ಪ್ರೌಢಶಾಲಾ ವಿಭಾಗ, ಸುಲೈಮಾನ್ ಅಧ್ಯಕ್ಷರಾಗಿರುವ ಶಾಲಾಭಿವೃದ್ಧಿ ಸಮಿತಿ, ಶಿವಪ್ರಸಾದ್ ಸೆಟ್ಟಿ ಅಧ್ಯಕ್ಷರಾಗಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಉಪನಿರ್ದೇಶಕ ವೈ.ಶಿವರಾಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಎನ್., ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ರಘುನಾಥ, ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಣಾಧಿಕಾರಿ ರತ್ನಾವತಿ, ಮುಖ್ಯ ಶಿಕ್ಷಕರಾಗಿರುವ ಗೋಪಾಲ ಎಂ., ದೈಹಿಕ ಶಿಕ್ಷಣ ಶಿಕ್ಷಕಿ ನೀರಜ ಸಹಿತ ಅಧಿಕಾರಿಗಳು, ಶಿಕ್ಷಕರು, ಜನಪ್ರತಿನಿಧಿಗಳು, ಸ್ಥಳೀಯಾಡಳಿತಗಳು ಹಾಗೂ ಕ್ರೀಡಾಭಿಮಾನಿಗಳು ಕಾರ್‍ಯಕ್ರಮದ ಯಶಸ್ವಿಗಾಗಿ ಶ್ರಮಿಸುತ್ತಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಎನ್. ಮತ್ತು ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ