ಸ್ವಾಮಿ ವಿವೇಕಾನಂದ ಚಿಕಾಗೋದಲ್ಲಿ 125 ವರ್ಷಗಳ ಹಿಂದೆ ಮಾಡಿದ ಭಾಷಣದ ವರ್ಷಾಚರಣೆಯನ್ನು ಬಂಟ್ವಾಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ವತಿಯಿಂದ ನಡೆಯಿತು.
ಪೂರ್ವ ವಿದ್ಯಾರ್ಥಿ ಕೀರ್ತಿರಾಜ್ ಮುಖ್ಯ ಅತಿಥಿಯಾಗಿ ಆಗಮಿಸಿ ಸ್ವಾಮಿ ವಿವೇಕಾನಂದರ ಭಾಷಣದ ಪ್ರಾಮುಖ್ಯತೆಯನ್ನು ವಿವರಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ ಅಪರ್ಣಾ ಆಳ್ವ ವಿವೇಕಾನಂದರ ತತ್ವಗಳು ಯುವಜನರಿಗೆ ಹೇಗೆ ಪ್ರಸ್ತುತ ಎಂಬುದನ್ನು ವಿವರಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ಹೈದರ್ ಆಲಿ ಪ್ರಾಸ್ತಾವಿಕ ಭಾಷಣ ನಿರ್ವಹಿಸಿದರು. ಇತಿಹಾಸ ವಿಭಾಗದ ಮುಖ್ಯಸ್ತ ಪ್ರೊ ಸತೀಶ್ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು .ವಿದ್ಯಾರ್ಥಿನಿ ಮಮತಾ ಕಾರ್ಯಕ್ರಮ ನಿರೂಪಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)