ರಾಜ್ಯ ಸರಕಾರ ಸುಭದ್ರವಾಗಿದ್ದು ಐದು ವರ್ಷ ಬಾಳುತ್ತದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ತಾಪಂ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಅವರು ಅಂಬೇಡ್ಕರ್ ಸಿದ್ಧಾಂತಗಳಲ್ಲಿ ನಂಬಿಕೆ ಇದ್ದವರು. ಸರಕಾರದ ಪರವಾಗಿಯೇ ಇದ್ದಾರೆ ಎಂದರು.
ಬಂಟ್ವಾಳದ ಪ್ರಮುಖ ಸಮಸ್ಯೆಯಾದ ತ್ಯಾಜ್ಯ ನಿರ್ವಹಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಯಾರಿಗೂ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಪ್ರಮುಖ ಆದ್ಯತೆಯಾಗಿದ್ದು, ಜನರ ಆಶಯದಂತೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…