ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲಾ ಕಚೇರಿ ಮತ್ತು ತಾಲೂಕು ಯೋಜನಾ ಕಚೇರಿಯ ನೂತನ ಕಟ್ಟಡಕ್ಕೆ ಭೂಮಿಪೂಜೆ, ಶಿಲಾನ್ಯಾಸ ಶನಿವಾರ ಬಂಟ್ವಾಳ ಯೋಜನಾ ಕಚೇರಿ ಆವರಣದಲ್ಲಿ ನಡೆಯಿತು.
ಪ್ರಾದೇಶಿಕ ನಿರ್ದೇಶಕ ಮಹಾವೀರ ಆಜ್ರಿ ಶಿಲಾನ್ಯಾಸ ನೆರವೇರಿಸಿದರು. ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾದ ಸುದರ್ಶನ್ ಜೈನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಚಂದ್ರಶೇಖರ್ ಕೆ, ಶ್ರೀ.ಕ್ಷೇ.ಧ.ಗ್ರಾ.ಯೋ. ಪ್ರಿಮೈಸನ್ ಮತ್ತು ಸ್ಟೇಷನರಿ ವಿಭಾಗ ನಿರ್ದೇಶಕರಾದ ಕೇಶವ ಗೌಡ, ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಜಯಾನಂದ್ .ಪಿ, ಬಂಟ್ವಾಳ ಬಿ.ಸಿ ರೋಡ್ ವಲಯದ ಜನಜಾಗೃತಿ ವೇದಿಕೆ ವಲಯಾಧ್ಯಕ್ಷರಾದ ರೋನಾಲ್ಡ್ ಡಿಸೋಜ, ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷರಾದ ಸದಾನಂದ ಗೌಡ, ಕೇಂದ್ರ ಒಕ್ಕೂಟ ಸಮಿತಿ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ, ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷರಾದ ವಸಂತಿ ಚಂದಪ್ಪ, ಸದಸ್ಯರಾದ ಮೀನಾಕ್ಷಿ ಜೆ ಗೌಡ, ಜನಜಾಗೃತಿ ವೇದಿಕೆ ಸದಸ್ಯರಾದ ಮನ್ಮಥ ಕುಮಾರ್ ಜೈನ್, ದೇವಪ್ಪ ಕುಲಾಲ್, ಆನಂದ ಜಿ, ಕಾಂಟ್ರಾಕ್ಟರ್ ಮಹಾಬಲ, ತಾಲೂಕಿನ ಒಕ್ಕೂಟದ ವಲಯಾಧ್ಯಕ್ಷರುಗಳು, ಯೋಜನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.