ಕಲೆಯ ವಿಚಾರದಲ್ಲಿ ತನ್ನದೇ ಆದ ಘನತೆ ಗೌರವವನ್ನು ಹೊಂದಿರುವ ವಿಶ್ವಕರ್ಮ ಸಮುದಾಯ ವಿಶ್ವಕ್ಕೇ ಮಾದರಿಯಾಗಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ಸೋಮವಾರ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ನಡೆದ ತಾಲೂಕುಮಟ್ಟದ ವಿಶ್ವಕರ್ಮ ಜಯಂತಿಯನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಸುಂದರ ದೇಶವನ್ನು ಕಟ್ಟುವ ಕಾಯಕದಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ ಎಂದ ಅವರು, ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರಿಯಾಶೀಲತೆಯನ್ನು ಪಡೆಯುವಂತಾಗಬೇಕು ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ವಿಶ್ವಕರ್ಮ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ, ಕಾರ್ಯದರ್ಶಿ ಸಂದೀಪ್ ಬಿ.ಆಚಾರ್ಯ, ಕೋಶಾಧಿಕಾರಿ ಜಯಚಂದ್ರ ಆಚಾರ್ಯ, ವಿಶ್ವಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ಪುಷ್ಪಾ ಡಿ.ಆಚಾರ್ಯ, ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ತಾಲೂಕು ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿದರು.
ಇದೇ ಸಂದರ್ಭ ದಾರುಶಿಲ್ಪಿ ಯಶೋಧರ ಆಚಾರ್ಯ ಪೂಪಾಡಿಕಟ್ಟೆ ಯವರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು. ಕಂದಾಯ ನಿರೀಕ್ಷಕರಾದ ರಾಮ ಕಾಟಿ ಪಳ್ಳ ಕಾರ್ಯಕ್ರಮ ನಿರೂಪಿಸಿದರು. ನವೀನ್ ಬೆಂಜನ ಪದವು ವಂದಿಸಿದರು. ಕಂದಾಯ ಇಲಾಖೆಯ ವಿಶು ಕುಮಾರ್, ಸದಾಶಿವ ಕೈಕಂಬ ಮೊದಲಾದವರು ಸಹಕರಿಸಿದರು.