ಜಿಲ್ಲಾ ಸುದ್ದಿ

ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ವಾರ್ಷಿಕೋತ್ಸವ

ಮಂಗಳೂರಿನ‌ ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಮೂರನೇ ವಾರ್ಷಿಕೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು.

ಜಾಹೀರಾತು

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಪದಕ‌ಗಳಿಸಿದ 7 ಮಂದಿ ಸ್ಕೇಟರ್ ಗಳಾದ ಡ್ಯಾಶೀಲ್ ಅಮಂಡಾ ಕಾನ್ಸೆಸ್ಸೋ, ಮೋಕ್ಷಾ ಸುವರ್ಣ, ದೀಯಾ ದಾಸ್, ಶಾಮಿಲ್ ಅರ್ಷದ್, ಖುಷಿ ರಾಣಿ, ಅರ್ಪಿತಾ ಶೇಟ್, ತನ್ಮಯ್ ಕೊಟ್ಟಾರಿ ಇವರಿಗೆ ತಲಾ 4 ಗ್ರಾಂ ಚಿನ್ನದ ನಾಣ್ಯವನ್ನು‌ನೀಡಿ ಅಭಿನಂದಿಸಲಾಯಿತು. ಜೊತೆಗೆ ರಾಷ್ಟ್ರೀಯ ಮಟ್ಟಕ್ಕೆ ತಲುಪಿದ 9 ಮಂದಿ ಸ್ಕೇಟರ್ ಗಳಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.

ಕಾರ್ಯಕ್ರಮದಲ್ಲಿ‌ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ, ಕಾರ್ಪೊರೇಟರ್ ಸುಧೀರ್ ಶೆಟ್ಟಿ, ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್, ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಅಧ್ಯಕ್ಷ ಜಯರಾಜ್, ತರಬೇತುದಾರರಾದ ಮೋಹನ್ ದಾಸ್,ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿ ಮಾಲಕ ಫ್ರಾನ್ಸಿಸ್ ಕಾನ್ಸೆಸ್ಸೋ ಮತ್ತಿತರರು ಅತಿಥಿಗಳಾಗಿ ಭಾಗವಹಿಸಿದ್ದರು.

ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಸ್ವಾಗತಿಸಿದರು. ನಸಿಯಾ ಶಾ ವರದಿ‌ ಮಂಡಿಸಿದರು.ಸರ್ವತ್ ತೋನ್ಸೆ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ