ವೈವಿಧ್ಯ

ಬ್ಯಾಂಕಿಂಗ್ ಪರೀಕ್ಷೆಗೆ ರೋಟರಿ ಬಂಟ್ವಾಳದಿಂದ 23ರಂದು ತರಬೇತಿ

  • 9845669640ಗೆ ಕರೆ ಮಾಡಿ, ಮೊದಲ 100 ಜನರಿಗಷ್ಟೇ ಅವಕಾಶ

ಬಂಟ್ವಾಳ ಪರಿಸರದ ಬ್ಯಾಂಕ್ ಪರೀಕ್ಷೆ ಎದುರಿಸುವವರು, ಬ್ಯಾಂಕ್ ಹುದ್ದೆಗೆ ಸೇರ್ಪಡೆಯಾಗಬಯಸುತ್ತಿರುವವರಿಗೆ ಇಲ್ಲಿಗೆ ಗುಡ್ ನ್ಯೂಸ್. ರೋಟರಿ ಕ್ಲಬ್ ಬಂಟ್ವಾಳ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳದ ವೃತ್ತಿ ಮಾರ್ಗದರ್ಶನ ಶಿಬಿರ ನುರಿತ ತಜ್ಞರಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರವನ್ನು ಸೆ.23ರಂದು ಭಾನುವಾರ ಮಧ್ಯಾಹ್ನ 2ರಿಂದ 5 ಗಂಟೆವರೆಗೆ ಏರ್ಪಡಿಸಿದೆ. ನೆನಪಿಡಿ, 9845669640 ಗೆ ಕರೆ ಮಾಡಿ ನೋಂದಾಯಿಸಿದ ಮೊದಲ 100 ಮಂದಿಗಷ್ಟೇ ಇಲ್ಲಿ ಅವಕಾಶ. ಪರೀಕ್ಷೆಯನ್ನು ಮಹತ್ವವಾಗಿ ಪರಿಗಣಿಸಿದವರು, ತರಬೇತಿಯ ಅವಶ್ಯಕತೆ ಇರುವವರು ಹಾಗೂ ಬ್ಯಾಂಕ್ ಪ್ರವೇಶಿಸುವ ಕುರಿತ ಮಾಹಿತಿಯನ್ನು ಪಡೆಯಲು ಇಚ್ಛಿಸುವವರಿಗೆ ರಾಜ್ಯ ಮಟ್ಟದ ನುರಿತ ತರಬೇತುದಾರರಾದ ಕಳೆದ 30 ವರ್ಷಗಳಿಂದ ಈ ಕ್ಷೇತ್ರದಲ್ಲಿ ಪರಿಣಿತಿಯುಳ್ಳ ಹಾಗೂ ಖ್ಯಾತ ಅಂಕಣಕಾರರೂ ಆಗಿರುವ ಕಾರ್ಪೊರೇಶನ್ ಬ್ಯಾಂಕ್ ಪ್ರಧಾನ ಕಛೇರಿ ಮಂಗಳೂರಿನಲ್ಲಿ ಹಿರಿಯ ವ್ಯವಸ್ಥಾಪಕ ಆರ್.ಕೆ ಬಾಲಚಂದ್ರ ಉಚಿತಾ ಪರೀಕ್ಷಾ ಪೂರ್ವ ತರಬೇತಿ ಕಾರ್ಯಗಾರವನ್ನು ನಡೆಸಿಕೊಡಲಿದ್ದಾರೆ.

ಜಾಹೀರಾತು

ಏನೇನಿರುತ್ತದೆ?

ಈ ಬಾರಿಯ ಪರೀಕ್ಷಾ ವಿಧಾನದಲ್ಲಿ ಬದಲಾವಣೆಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪರೀಕ್ಷಾ ಸಿದ್ಧತೆ ಬಗ್ಗೆ ತರಬೇತಿ ನೀಡಲಿದ್ದಾರೆ. ಈಗಾಗಲೇ ಬ್ಯಾಂಕ್‌ಗುಮಾಸ್ತ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು,  ಈ ಭಾಗದ ಯುವಜನತೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಉದ್ಯೋಗವಕಾಶಗಳನ್ನು ಪಡೆಯಲು ಸಹಕರಿಸುವ ನಿಟ್ಟಿನಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದು, ಮೊದಲು ಹೆಸರು ನೋಂದಾಯಿಸುವ 100 ಜನರಿಗೆ ಮಾತ್ರ ಅವಕಾಶವಿರುತ್ತದೆ. ಆಸಕ್ತರುತರಬೇತಿಯ ಪ್ರಯೋಜನವನ್ನು ಪಡೆಯಬಹುದು ಎಂದವರು ಮಾಹಿತಿ ತಿಳಿಸಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರಕ್ಕೆ ಪ್ರವೇಶ ಬಯಸುವವರಿಗೆ ರೋಟರಿ ಕ್ಲಬ್ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುವರ್ಣಾವಕಾಶ ನೀಡಿದೆ. ಬಂಟ್ವಾಳ ಪರಿಸರದವರೇ ತ್ವರೆ ಮಾಡಿ, ಕರೆ ಮಾಡಿ 9845669640.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

4 hours ago