ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಗೂಡಿನ ಬಳಿಯಲ್ಲಿ ಎಂಟರ ಹರೆಯದ ೪ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಭಂದಿತರಾಗಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಮಕ್ಕಳು ಹಾಗೂ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಯುವಂತಾಗಲು ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿ ಇನ್ನು ಮುಂದೆ ಯಾರು ಕೂಡ ಇಂತಹ ಘೋರ ಅಪರಾಧವನ್ನು ಮಾಡುವುದನ್ನು ತಡೆಯುವಂತಾಗಲು ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಪುರಸಭಾ ಸದಸ್ಯ ಬಿ.ವಾಸು ಪೂಜಾರಿ ಲೊರೆಟ್ಟೋ ಒತ್ತಾಯಿಸಿದ್ದಾರೆ.
ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯವನ್ನು ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ ಖಂಡಿಸಿ ಹೇಳಿಕೆ ನೀಡಿದ್ದಾರೆ.
Be the first to comment on "ಬಾಲಕಿ ಲೈಂಗಿಕ ದೌರ್ಜನ್ಯ: ಕಾಂಗ್ರೆಸ್ ತೀವ್ರ ಖಂಡನೆ, ಸೂಕ್ತ ಕ್ರಮಕ್ಕೆ ಒತ್ತಾಯ"