ಬಂಟ್ವಾಳ

ಬಾಲಕಿ ಲೈಂಗಿಕ ದೌರ್ಜನ್ಯ: ಕಾಂಗ್ರೆಸ್ ತೀವ್ರ ಖಂಡನೆ, ಸೂಕ್ತ ಕ್ರಮಕ್ಕೆ ಒತ್ತಾಯ

ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಗೂಡಿನ ಬಳಿಯಲ್ಲಿ ಎಂಟರ ಹರೆಯದ ೪ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಭಂದಿತರಾಗಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಜಾಹೀರಾತು

ಮಕ್ಕಳು ಹಾಗೂ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಯುವಂತಾಗಲು ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿ ಇನ್ನು ಮುಂದೆ ಯಾರು ಕೂಡ ಇಂತಹ ಘೋರ ಅಪರಾಧವನ್ನು  ಮಾಡುವುದನ್ನು ತಡೆಯುವಂತಾಗಲು ಸೂಕ್ತ  ಕಾನೂನು ಕ್ರಮವನ್ನು  ಕೈಗೊಳ್ಳಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಪುರಸಭಾ ಸದಸ್ಯ ಬಿ.ವಾಸು ಪೂಜಾರಿ ಲೊರೆಟ್ಟೋ ಒತ್ತಾಯಿಸಿದ್ದಾರೆ.

ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯವನ್ನು ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ ಖಂಡಿಸಿ ಹೇಳಿಕೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ