ಬಂಟ್ವಾಳ ರೋಟರಿ ಕ್ಲಬ್ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಯ ದೃಷ್ಟಿಯಿಂದ ಹಮ್ಮಿಕೊಂಡಿರುವ ಸಂಚಾರಿ ತಾರಾಲಯಕ್ಕೆ ಶುಕ್ರವಾರದ ರಜೆಯ ಹಿನ್ನೆಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಪರಿಸರದ ವಿದ್ಯಾರ್ಥಿಗಳು ವೀಕ್ಷಿಸಿ ಸಂಭ್ರಮಿಸಿದರು.
ಬಿ.ಸಿ.ರೋಡಿನ ರೋಟರಿ ಸಭಾಭವನದಲ್ಲಿ ತಾರಾಲಯ ವೀಕ್ಷಣೆಗೆ ಅವಕಾಶ ಕಲ್ಪಸಲಾಗಿತ್ತು. ಸ್ಥಳೀಯ ಶಾಲೆಯ ವಿದ್ಯಾರ್ಥಿಗಳು ಆಗಮಿಸಿ ಸೌರಮಂಡಲದ ಚಟುವಟಿಕೆಯನ್ನು ವೀಕ್ಷಿಸಿ ಸಂಭ್ರಮಿಸಿದರು.
ಶುಕ್ರವಾರದ ಪ್ರದರ್ಶನವನ್ನು ಬಂಟ್ವಾಳ ರೋಟರಿ ಕ್ಲಬ್‌ನ ಆನ್ಸ್ ವಿಭಾಗದ ಪ್ರಾಯೋಜಕತ್ವದಲ್ಲಿ ನಡೆದಿದ್ದು ಅಧ್ಯಕ್ಷೆ ವಿದ್ಯಾ ಅಶ್ವನಿ ರೈ ದೀಪ ಬೆಳಗಿಸಿ ಉದ್ಘಾಟಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ, ಕಾರ್ಯದರ್ಶಿ ಶಿವಾನಿ ಬಾಳಿಗ, ನಿಕಟಪೂರ್ವ ಕಾರ್ಯದರ್ಶಿ ಕೆ.ನಾರಾಯಣ ಹೆಗ್ಡೆ ಹಾಜರಿದ್ದರು.
ಇದೇ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈ ಸಂಚಾರಿ ತಾರಾಲಯಕ್ಕೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಅವರು ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ದೃಷ್ಟಿಯಿಂದ ಬಂಟ್ವಾಳ ರೋಟರಿ ಕ್ಲಬ್ ತಾರಾಲಯ ಕಲ್ಪನೆಯನ್ನು ಮಾಡಿರುವುದು ಅಭಿನಂದನೀಯ ಇದರಿಂದ ಬಾಹ್ಯಾಕಾಶದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳುವಳಿಕೆ ಹೊಂದಲು ಸಾಧ್ಯವಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮತ್ತಿತರರು ಹಾಜರಿದ್ದರು. ಶುಕ್ರವಾರ ತಾರಾಲಯ ವೀಕ್ಷಣೆ ಕಾರ್ಯಕ್ರಮ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಅವರು ಆಗಮಿಸಿ ರೋಟರಿ ಕಾರ್ಯಗಳ ಬಗ್ಗೆ ಮೆಚ್ಚುಗೆ ಸೂಸಿದರು.