ಬಂಟ್ವಾಳ ತಾಲೂಕಿನ ಗೂಡಿನಬಳಿಯ ಮುಗ್ದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದ.ಕ.ಜಿಲ್ಲಾ ಎಸ್.ಸಿ. ಮೋರ್ಚಾ ತೀವ್ರವಾಗಿ ಖಂಡಿಸಿದ್ದು, ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ಒದಗಿಸಬೇಕು ಎಂದು ಒತ್ತಾಯಿಸಿದೆ.
ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ರಾಜ್ಯದ ಹಲವೆಡೆ ಇಂಥ ದುಷ್ಕೃತ್ಯಗಳು ನಡೆಯುತ್ತಿರುವ ಖೇದನೀಯ, ಮಂಡ್ಯ ಸಹಿತ ಹಲವೆಡೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದು, ಅದರಲ್ಲೂ ಬುದ್ಧಿವಂತರ ಜಿಲ್ಲೆ ಎನಿಸಿದ ದ.ಕ. ಜಿಲ್ಲೆಯಲ್ಲಿ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಮಾನವ ಸಮಾಜ ತಲೆತಗ್ಗಿಸುವ ವಿಚಾರ ಎಂದು ಹೇಳಿದರು.
ಆರೋಪಿಗಳನ್ನು ಸಕಾಲದಲ್ಲಿ ಬಂದಿಸಿದ ಪೋಲಿಸ್ ಇಲಾಖೆಯನ್ನು ಅಭಿನಂದಿಸಿದ ಅವರು, ಜಿಲ್ಲೆಯಲ್ಲಿ ಭವಿಷ್ಯದಲ್ಲಿ ಈ ರೀತಿಯ ಪ್ರಕರಣಗಳು ಆಗದಂತೆ ತಡೆಯುವ ನಿಟ್ಟಿನಲ್ಲಿ ಪ್ರಯತ್ನಗಳಾಗಬೇಕು ಎಂದು ಒತ್ತಾಯಿಸಿದ್ದಾರೆ.
Be the first to comment on "ಆರೋಪಿಗಳಿಗೆ ಕಠಿಣ ಶಿಕ್ಷೆ: ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾ ಒತ್ತಾಯ"