ಬಂಟ್ವಾಳ

ಬಾಲಕಿ ಕುಟುಂಬಕ್ಕೆ ರಕ್ಷಣೆ ಒದಗಿಸಲು ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ

ಬಿ.ಸಿ.ರೋಡಿನ ಗೂಡಿನಬಳಿಯಲ್ಲಿ ನಡೆದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಹೇಯ ಕೃತ್ಯವಾಗಿದ್ದು, ಇದನ್ನು ಬಿಜೆಪಿ ಮಹಿಳಾ ಮೋರ್ಚಾ ಖಂಡಿಸುತ್ತದೆ ಹಾಗೂ ಬಾಲಕಿ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸುವಂತೆ ಒತ್ತಾಯಿಸುತ್ತದೆ ಎಂದು ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ. ಭಟ್ ಹೇಳಿದರು.

ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಕೃತ ಮನಸ್ಸಿನ ವ್ಯಕ್ತಿಗಳು ನಡೆಸಿದ ಪ್ರಕರಣ ಇದಾಗಿದ್ದು, ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು. ಶಾಸಕ ರಾಜೇಶ್ ನಾಯ್ಕ್ ಅವರು ಬಾಲಕಿ ಇದ್ದ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದು, ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ಧೈರ್ಯ ತುಂಬಲು ಕೌನ್ಸಲಿಂಗ್ ಕೇಂದ್ರಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿದರು. ಇಂಥ ಪ್ರಕರಣಗಳನ್ನು ಕೈಗೆತ್ತಿಕೊಳ್ಳದಂತೆ ವಕೀಲರಿಗೆ ಮನವಿ ಮಾಡಿದ ಅವರು ಜಿಲ್ಲಾಡಳಿತ ಸಂತ್ರಸ್ತರ ಕುಟುಂಬಗಳಿಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷ ಪ್ರಮುಖರಾದ ನಳಿನಿ ಬಿ. ಶೆಟ್ಟಿ, ಯಶೋಧ ಬಿ., ಜಯಂತಿ ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts