ಬಿ.ಸಿ.ರೋಡಿನ ಗೂಡಿನಬಳಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಾದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಬಂಟ್ವಾಳ ತಾಲೂಕು ಯುವ ಕಾಂಗ್ರೆಸ್ ಒತ್ತಾಯಿಸಿದೆ.
ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಪ್ರಶಾಂತ್ ಕುಲಾಲ್ ನೇತೃತ್ವದಲ್ಲಿ ಬಂಟ್ವಾಳ ಮಿನಿ ವಿಧಾನ ಸೌಧದ ಎದುರು ಶನಿವಾರ ಸಂಜೆ ಪ್ರತಿಭಟನೆ ನಡೆಸುವ ಮೂಲಕ ಸರಕಾರದ ಮುಂದೆ ಈ ಬೇಡಿಕೆಗಳನ್ನು ಮುಂದಿಡಲಾಯಿತು.
ಸಂತ್ರಸ್ತ ಕುಟುಂಬಕ್ಕೆ ಕಾನೂನು ರಕ್ಷಣೆ, ಪರಿಹಾರ ಒದಗಿಸಬೇಕು, ಪ್ರಕರಣಕ್ಕೆ ಕುಮ್ಮಕ್ಕು ನೀಡಿರುವ ಆರೋಪಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಗಳನ್ನು ನಡೆಸಬೇಕು, ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿರುವ ಸಂಘಟನೆ ವ್ಯಕ್ತಿಗಳನ್ನು ಕೂಡ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಗಿದೆ.
ಪ್ರಕರಣವನ್ನು ಬೇಧಿಸಿ ನೈಜ ಆರೋಪಿಗಳನ್ನು ಬಂಧಿಸಿರುವ, ದಕ್ಷಿಣ ಕನ್ನಡ ಹಾಗೂ ಬಂಟ್ವಾಳ ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಕಾರ್ಯಾಚರಣೆಯನ್ನು ಅಭಿನಂದಿಸಿದ ಕಾರ್ಯಕರ್ತರು, ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮನ್, ತಾಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಪಕ್ಷ ಪ್ರಮುಖರಾದ ಬಿ. ವಾಸು ಪೂಜಾರಿ, ಗಂಗಾಧರ ಪೂಜಾರಿ, ಜನಾರ್ಧನ ಚೆಂಡ್ತಿಮಾರ್, ಅಬೂಬಕ್ಕರ್ ಸಿದ್ಧಿಕ್, ಸುದೀಪ್ ಆಳ್ವ, ವಿಶ್ವನಾಥ್ ಗೌಡ ಮಣಿ, ಮಹಮ್ಮದ್ ಶರೀಫ್, ಮಹಮ್ಮದ್ ಇರ್ಶದ್, ಜೆಸಿಂತಾ, ಗಾಯತ್ರಿ ಪ್ರಕಾಶ್ , ವೇದಾವತಿ, ರಿಯಾಜ್ ಹುಸೈನ್ ಕೆಳಗಿನ ಪೇಟೆ, ಮಹಮ್ಮದ್ ನಂದಾವರ, ಸುಧೀರ್ ಶೆಟ್ಟಿ ಇರ್ವತ್ತೂರು, ಪ್ರೀಯರಾಜ್ ಬಂಟ್ವಾಳ , ರಮೇಶ ಕುಲಾಲ್, ಮಹೇಶ್ ನಾಯಕ್ , ದಿವಾಕರ ಪೂಜಾರಿ, ಭರತ್ ಪೂಜಾರಿ, ಕಿಶೋರ್ ಪೂಜಾರಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
Be the first to comment on "ಸಂತ್ರಸ್ತ ಬಾಲಕಿ ಕುಟುಂಬಕ್ಕೆ ಕಾನೂನು ರಕ್ಷಣೆ, ಪರಿಹಾರ: ಯುವ ಕಾಂಗ್ರೆಸ್ ಒತ್ತಾಯ"