ರೋಟರಿ ಕ್ಲಬ್ ಬಂಟ್ವಾಳ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳದ ವೃತ್ತಿ ಮಾರ್ಗದರ್ಶನ ಸಂಘದ ಆಶ್ರಯದಲ್ಲಿ ಬ್ಯಾಂಕಿಂಗ್ ಪರೀಕ್ಷಾಪೂರ್ವ ತರಬೇತಿ ಶಿಬಿರ ಬಿ.ಸಿ.ರೋಡಿನ ರೋಟರಿ ಹಾಲ್ ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮಂಜುನಾಥ ಆಚಾರ್ಯ ಉದ್ಘಾಟಿಸಿ, ಗ್ರಾಮೀಣ ಭಾಗದ ಯುವಜನತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ನಡೆಸುವ ತರಬೇತಿ ಶಿಬಿರಗಳಿಗೆ ರೋಟರಿ ಕ್ಲಬ್ ಸದಾ ಪ್ರೋತ್ಸಾಹ ನೀಡಲಿದ್ದು, ಉದ್ಯೋಗಾವಕಾಶ ಸೃಷ್ಟಿಸುವುದು ರೋಟರಿಯ ಧ್ಯೇಯ ಎಂದರು.
ರಾಷ್ಟ್ರಮಟ್ಟದ ತರಬೇತುದಾರ ಕಾರ್ಪೊರೇಷನ್ ಬ್ಯಾಂಕ್ ಪ್ರಧಾನ ಕಚೇರಿಯ ಹಿರಿಯ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ ತರಬೇತಿ ಶಿಬಿರ ನಡೆಸಿಕೊಟ್ಟರು. ಬ್ಯಾಂಕಿಂಗ್ ಪರೀಕ್ಷೆಗಳ ಸಿದ್ಧತೆಯ ವಿವಿಧ ಹಂತಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯಶಸ್ಸಿನ ಸೂತ್ರಗಳ ಬಗ್ಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್ ಬಂಟ್ವಾಳದ ಕಾರ್ಯದರ್ಶಿ ಶಿವಾನಿ ಬಾಳಿಗಾ, ಪದಾಧಿಕಾರಿಗಳಾದ ರಿತೇಶ್ ಬಾಳಿಗಾ, ಪುಷ್ಪರಾಜ ಹೆಗ್ಡೆ, ಪ್ರಕಾಶ್ ಬಾಳಿಗಾ, ಪ್ರತಿಭಾ ರೈ ಉಪಸ್ಥಿತರಿದ್ದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳದ ಆಂಗ್ಲ ಪ್ರಾಧ್ಯಾಪಕ ನಂದಕಿಶೋರ್ ಎಸ್. ಸ್ವಾಗತಿಸಿದರು. ಲಿಖಿತಾ ಕಾರ್ಯಕ್ರಮ ನಿರೂಪಿಸಿದರು.