ಬಂಟ್ವಾಳ

ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಅಪಘಾತ

ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಎದುರು ಅಜ್ಜಿಬೆಟ್ಟು ಕಡೆಗೆ ತಿರುಗುವ ಜಾಗದಲ್ಲಿ ಸರಕಾರಿ ಬಸ್ ಮತ್ತು ಹೊಂಡಾ ಆಕ್ಟಿವಾ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದೆ. ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಸವಾರ ಗಾಯಗೊಂಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭಿಸಿದೆ.

ಜಾಹೀರಾತು

ಈ ಜಾಗ ತೀರಾ ಅಪಾಯಕಾರಿಯಾಗಿದ್ದು, ವಾಹನಗಳನ್ನು ತಿರುಗಿಸುವ ವೇಳೆ ಎಡಬಲಗಳನ್ನು ನೋಡದೇ ಇದ್ದರೆ ಅಪಘಾತ ಖಚಿತ ಎನ್ನುವಂತಿದೆ. ಆದರೆ ಸಂಚಯಗಿರಿ- ಅಜ್ಜಿಬೆಟ್ಟು ಕಡೆಗೆ ಹೋಗುವವರಿಗೆ ಈ ತಿರುವು ಅಗತ್ಯವಾಗಿದ್ದು, ಈ ಜಾಗದಲ್ಲಿ ಪೊಲೀಸರು ಟ್ರಾಫಿಕ್ ಕಂಟ್ರೋಲ್ ಮಾಡುವುದು ಪ್ರತಿ ಕ್ಷಣವೂ ಅಗತ್ಯವಿದೆ. ಪೀಕ್ ಅವರ್ ಗಳಲ್ಲಿ ವಾಹನ ದಟ್ಟಣೆ ಜಾಸ್ತಿ ಇರುವ ಕಾರಣ ವಾಹನ ಸವಾರರೂ ಇಲ್ಲಿ ವೇಗವನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts