ಬಂಟ್ವಾಳ

ಪ್ಲಾಸ್ಟಿಕ್ ನಿಷೇಧ ಕುರಿತು ಅ.2ರಂದು ಬಂಟ್ವಾಳದಲ್ಲಿ ಜಾಥಾ

ಬಂಟ್ವಾಳ ಪುರಸಭೆ, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಜೆಸಿಐ, ಬಂಟ್ವಾಳ ವರ್ತಕರ ವಿವಿದ್ದೋದ್ದೇಶ ಸಹಕಾರಿ ಸಂಘ, ಇದರ ವತಿಯಿಂದ ಅಕ್ಟೋಬರ್ 2, ಗಾಂಧಿ ಜಯಂತಿಯ ಪ್ರಯುಕ್ತ ಬೆಳಗ್ಗೆ 9ರಿಂದ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ನಿಷೇಧದ ಕುರಿತು ಜಾಥಾ ನಡೆಯಲಿದೆ. ಮೆಲ್ಕಾರ್ ಎಂ.ಎಚ್.ಹೈಟ್‌ನಿಂದ, ಬಿ.ಸಿ.ರೋಡ್ ಪೂಂಜ ಮೈದಾನನಿಂದ ಮತ್ತು ಎಸ್.ವಿ.ಎಸ್ ಕಾಲೇಜು ಬಂಟ್ವಾಳದಿಂದ ಜಾಥಾಗಳು ಹೊರಟು ಸ್ಪರ್ಶ ಕಲಾ ಮಂದಿರದಲ್ಲಿ ಸಮಪ್ತಿಗೊಳ್ಳಲಿವೆ.

ಜಾಹೀರಾತು

ಈ ಜಾಥಾ ಕಾರ್ಯಕ್ರಮದಲ್ಲಿ ಬಂಟ್ವಾಳ ಪುರಸಭೆಯ ಜನಪ್ರತಿನಿಧಿಗಳು, ಸಮಸ್ತ ನಾಗರೀಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವರ್ತಕರ ಸಂಘದವರು, ವಿದ್ಯಾರ್ಥಿಗಳು ಭಾಗವಹಿಸಿ ಬಂಟ್ವಾಳ ನಗರವನ್ನು ಸ್ವಚ್ಛ, ನಿರ್ಮಲ, ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಬೇಕಾಗಿ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ವಿನಂತಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts