ಸಂಗಬೆಟ್ಟಿನಲ್ಲಿ ಸರಕಾರಿ ಸವಲತ್ತುಗಳ ವಿತರಣೆ

ಕಂದಾಯ ಇಲಾಖೆ, ಸಂಗಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ವ್ರದ್ದಾಪ್ಯ ವೇತನ ಮತ್ತು ವಿವಿಧ ಸರಕಾರಿ ಸವಲತ್ತು ವಿತರಣೆ ಕಾರ್ಯಕ್ರಮ ಸಂಗಬೆಟ್ಟು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು.
ಶಾಸಕ ರಾಜೇಶ್ ನಾಯ್ಕ್ ಉಳ್ಳಿಪ್ಪಾಡಿ ಅವರು 46 ಜನರಿಗೆ ಹಕ್ಕುಪತ್ರ,  10 ಜನರಿಗೆ ಮಾಸಿಕ ವೇತನ ಪಿಂಚಣಿ , 10 ಜನರಿಗೆ ಪಾಕ್ರತಿಕ ವಿಕೋಪ ಚೆಕ್ ಹಾಗೂ ರಾಷ್ಟ್ರೀಯ ಕುಟುಂಬ ಸಹಾಯ ಧನ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ಮಾಜಿ ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಗ್ರಾಮ ಪಂಚಾಯತ್ ಅದ್ಯಕ್ಷೆ ಗುಲಾಬಿ ಶೆಟ್ಟಿ ಗ್ರಾ.ಪಂ.ಉಪಾಧ್ಯಕ್ಷ ಸತೀಶ್ ಪೂಜಾರಿ, ಎಪಿಎಂಸಿ ಮಾಜಿ ಸದಸ್ಯ ರತ್ನಾಕರ ಚೌಟ , ಗ್ರಾ.ಪಂ.ಸದಸ್ಯ ರಾದ ಶ್ರೀಧರ ಎಸ್ ಪಿ, ಸುಲೋಚನ, ನಳಿನಿ , ವಿಮಲ, ಸುರೇಶ್ ಕುಲಾಲ, ಮಯ್ಯೆದಿ, ದೇವಪ್ಪ ಕರ್ಕೇರ, ಪದ್ಮಲತಾ , ಪಂಚಾಯತ್ ಸಿಬ್ಬಂದಿ ಮಹಾಬಲ ನಾಯ್ಕ, ಗ್ರಾಮ ಸಹಾಯ ಕ ಸತೀಶ್ ಶೆಟ್ಟಿ ಗಾರ್, ಪ್ರಮುಖರಾದ ಉಮೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ ಕಂದಾಯ ನಿರೀಕ್ಷಕ ‌ನವೀನ್ ಕುಮಾರ್ ಸ್ವಾಗತಿಸಿ , ಗ್ರಾಮ ಕರಣಿಕ  ಜನಾರ್ಧನ  ವಂದಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಲ್ಬಿಯಾ ಪೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.
ಗುಂಡು ಎಸೆತ ಹಾಗೂ ಚಕ್ರ ಎಸೆತದಲ್ಲಿ ಮಿಂಚಿದ ಸಿದ್ದಕಟ್ಟೆ ಗುಣಶ್ರೀ ವಿದ್ಯಾಲಯದ ವಿದ್ಯಾರ್ಥಿ ರಾಷ್ಟ್ರೀಯ ಕ್ರೀಡಾ ಪಟು ರಮ್ಯ ಶ್ರೀ ಜೈನ್ ಅವರನ್ನು ಗೌರವಿಸಲಾಯಿತು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಂಗಬೆಟ್ಟಿನಲ್ಲಿ ಸರಕಾರಿ ಸವಲತ್ತುಗಳ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*