ಬಂಟ್ವಾಳ

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಅಕ್ಟೋಬರ್ 6ರಂದು

ಬಂಟ್ವಾಳ ಎಸ್.ವಿ.ಎಸ್. ದೇವಳ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಅಕ್ಟೋಬರ್ 6ರಂದು ನಡೆಯಲಿದೆ. ದ.ಕ. ಜಿಲ್ಲಾ ಪಂಚಾಯತ್, ತಾಪಂ, ಪುರಸಭೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವಜನ ಒಕ್ಕೂಟ ಬಂಟ್ವಾಳ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಎಸ್.ವಿ.ಎಸ್. ದೇವಳ ವಿದ್ಯಾಸಂಸ್ಥೆ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಉದ್ಘಾಟಿಸುವರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸುವರು ಎಂದು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ನವೀನ್ ಪಿ.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಪುರುಷ ಮತ್ತು ಮಹಿಳೆಯರಿಗೆ 100 ಮೀ, 200 ಮೀ, 400 ಮೀ, 800 ಮೀ, 1500 ಮೀ ಓಟ, ಗುಂಡೆಸೆತ, ಉದ್ದ ಜಿಗಿತ, ಎತ್ತರ ಜಿಗಿತ, ಜ್ಯಾವಲಿನ್ ಎಸೆತ, ಚಕ್ರ ಎಸೆತ, ತ್ರಿವಿಧ ಜಿಗಿತ, 100 ಮೀ. ಅಡೆತಡೆ ಓಟ, 4  100 ಮೀ ರಿಲೇ, ಪುರುಷರಿಗೆ 5000 ಮೀ ಓಟ, ಮಹಿಳೆಯರಿಗೆ 300 ಮೀ. ಓಟದ ಸ್ಪರ್ಧೆ ಇರಲಿದೆ. ಕಬಡ್ಡಿ, ಖೊಖೊ, ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್, ತ್ರೋಬಾಲ್, ಗುಂಪು ಸ್ಪರ್ಧೆ ಇರಲಿದ್ದು, ಪುರುಷರಿಗೆ ಫುಟ್ ಬಾಲ್ ಸ್ಪರ್ಧೆ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts