ಭಾರತೀಯ ಸೈನಿಕರು ಪಾಕಿಸ್ತಾನದ ನೆಲದಲ್ಲಿ ಭಯೋತ್ಪಾದಕರನ್ನು ಸದೆಬಡಿದಿರುವುದು ಹೆಮ್ಮೆಯ ಸಂಗತಿ ಎಂದು ನಿವೃತ್ತ ಯೋಧ ಹರೀಶ್ ದೇವಂದಬೆಟ್ಟು ಹೇಳಿದರು.
ಜೇಸೀ ಐ ಜೋಡುಮಾರ್ಗ ನೇತ್ರಾವತಿ , ಇಂಟರಾಕ್ಟ್ ಕ್ಲಬ್ ರೋಟರಿ ಕ್ಲಬ್ ಬಂಟ್ವಾಳ ಟೌನ್ ಹಾಗೂ ಅಳುಪ ಸಮಾಜವಿಜ್ಞಾನ ಸಂಘದ ಆಶ್ರಯದಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರಿನಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ದಿನಾಚರಣೆಯಲ್ಲಿ ಯೋಧರಿಗೆ ಸಂದೇಶ ಕಳುಹಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ದೇಹದ ನಿರ್ದಿಷ್ಟ ಭಾಗದಲ್ಲಿ ಸಮಸ್ಯೆ ಉಂಟಾದಾಗ ಅದನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆಯುವಂತೆ ದೇಶದ ಭದ್ರತೆಗೆ ತೊಂದರೆ ಉಂಟುಮಾಡುವ ಭಯೋತ್ಪಾದಕರ ನೆಲೆಗಳನ್ನು ವೈರಿ ರಾಷ್ಟ್ರದೊಳಗೆ ಗುಪ್ತವಾಗಿ ನುಗ್ಗಿ ನಾಶಪಡಿಸುವುದೇ ಸರ್ಜಿಕಲ್ ಸ್ಟೈಕ್ ಎಂದು ಅವರು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸುಜಾತ, ಸದಾಶಿವ ನಾಯಕ್ , ಚಿನ್ನಪ್ಪ ಜಾಲ್ಸೂರು, ಭಾರತಿ, ಪ್ರಕಾಶ್, ವರಮಹಾಲಕ್ಷ್ಮೀ, ಇಂಟರಾಕ್ಟ್ ಕ್ಲಬ್ ಅಧ್ಯಕ್ಷೆ ಶ್ರೀವಿದ್ಯಾ ಉಪಸ್ಥಿತರಿದ್ದರು.
ಶಿಕ್ಷಕ ಹರಿಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೇಜೆಸಿ ಅಧ್ಯಕ್ಷೆ ದಿವ್ಯಾ ಸ್ವಾಗತಿಸಿ, ಪಾವನಾ ವಂದಿಸಿದರು. ಧನ್ಯಾ ಕಾರ್ಯಕ್ರಮ ನಿರೂಪಿಸಿದರು.