ದೇಶದಲ್ಲಿ ಫ್ಯಾಸಿಸ್ಟ್ ಶಕ್ತಿಗಳು ಸಂವಿಧಾನವನ್ನು ನಾಶ ಮಾಡಿ ಮನುಸ್ಮೃತಿಯನ್ನು ಜಾರಿ ಮಾಡಲು ಹೊರಟಿವೆ. ಇಂತಹ ಸನ್ನಿವೇಶದಲ್ಲಿ ಸಂವಿಧಾನ ಉಳಿಸಲು ಜಾತ್ಯತೀತ ಶಕ್ತಿಗಳು ಒಂದಾಗಬೇಕಾಗಿದೆ. ಎಂದು ಪಿಎಫ್‌ಐ ರಾಷ್ಟ್ರೀಯ ಕಾರ್ಯದರ್ಶಿ ಅನೀಸ್ ಅಹ್ಮದ್ ಹೇಳಿದ್ದಾರೆ.
ಪಿಎಫ್‌ಐ ವತಿಯಿಂದ ಬಿ.ಸಿ.ರೋಡ್-ಗೂಡಿನಬಳಿ ಸಮುದಾಯ ಭವನದಲ್ಲಿ ರವಿವಾರ ನಡೆದ ಸೇವ್ ಸೊಸೈಟಿ ಸೇವ್ ನೇಷನ್ ರಾಷ್ಟ್ರೀಯ ಅಭಿಯಾನದ ಅಂಗವಾಗಿ ಸಮುದಾಯ ನಾಯಕರ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಪಿಎಫ್‌ಐ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್ ಅಕ್ಕರಂಗಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಗೂಡಿನಬಳಿ ಮಸ್ಜಿದ್ ಎ ಮುತ್ತಲಿಬ್ ಮಸೀದಿಯ ಅಧ್ಯಕ್ಷ ಜಿ.ಮುಹಮ್ಮದ್, ಬಂಟ್ವಾಳ ತಾಲೂಕು ಸಮಿತಿ ಕಾರ್ಯದರ್ಶಿ ಸಲೀಮ್ ಫರಂಗಿಪೇಟೆ, ಸಮಿತಿ ಸದಸ್ಯ ಸಿದ್ದೀಕ್ ಕಲ್ಲಡ್ಕ ಉಪಸ್ಥಿತರಿದ್ದರು.
Be the first to comment on "ಸಂವಿಧಾನ ಉಳಿಸಲು ಜಾತ್ಯತೀತ ಶಕ್ತಿಗಳು ಒಂದಾಗಬೇಕಾಗಿದೆ: ಅನೀಸ್ ಅಹ್ಮದ್"