ಬಂಟ್ವಾಳ

ಎಸ್.ವಿ.ಎಸ್ ಪ.ಪೂ. ಕಾಲೇಜು: ಗಾಂಧಿಜೀ 150ನೇ ಜನ್ಮದಿನಾಚರಣೆ

ಅಹಿಂಸಾ ಮಾರ್ಗವು ಸ್ವಾರ್ಥರಹಿತ ಸಮಾಜ ನಿರ್ಮಾಣಕ್ಕೆ ಪ್ರೇರಕ ಎಂದು ಎಸ್.ವಿ.ಎಸ್ ಪ.ಪೂ. ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ ಹೇಳಿದರು.
ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಹಾತ್ಮ ಗಾಂಧಿಜೀಯವರ 150ನೇ ಜನ್ಮದಿನಾಚರಣೆ ಕಾರ್‍ಯಕ್ರಮದಲ್ಲಿ ದೀಪ ಪ್ರಜ್ವಲನೆ ಮಾಡಿ ಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಜಾತಿಯತೆ, ಮೇಲು-ಕೀಳು, ಅಸ್ಪಶೃಶ್ಯತೆಗಳಿಂದ ವಕ್ತಿತ್ವ ವಿಕಸನ ಮತ್ತು ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಧೂಮಪಾನ-ಮಧ್ಯಪಾನ ಕೆಟ್ಟ ಚಟಗಳನ್ನು ಜೀವನದಲ್ಲಿ ಆಳವಡಿಸಿಕೊಂಡು ಯುವಜನತೆ ಸ್ವಾರ್ಥಕ್ಕಾಗಿಭರವಸೆಗಳನ್ನು ನಾಶಮಾಡುತ್ತಿದ್ದಾರೆ. ಶಿಕ್ಷಣದ ಜಾಗೃತಿ ಮೂಲಕ ಸಮಾಜದಲ್ಲಿರುವ ಕೆಟ್ಟ ಪಿಡುಗುಗಳನ್ನು ಹೋಗಲಾಡಿಸಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಯುವಜನತೆ ಗಾಂಧಿಜೀಯ ತತ್ವ-ಆದರ್ಶಗಳನ್ನು ಪಾಲಿಸಿ ಜೀವನುದ್ದಕ್ಕೂ ಅನುಸರಿಸಿಕೊಂಡುಸ್ವಚ್ಛ ಭಾರತದ ನಿರ್ಮಾಣಕ್ಕೆಪಣತೊಡಬೇಕು ಎಂದು ಹೇಳಿದರು.

ಕಾರ್‍ಯಕ್ರಮದಲ್ಲಿ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಬಾಲಕೃಷ್ಣ ಗೌಡ, ಎಲ್ಲಾ ಉಪನ್ಯಾಸಕ-ಉಪನ್ಯಾಸಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts