ವಕೀಲರ ಸಂಘ ಬಂಟ್ವಾಳ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಅಧಿವಕ್ತ ಪರಿಷತ್ ಬಂಟ್ವಾಳ , ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಮಂಗಳವಾರ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಬಂಟ್ವಾಳ ನ್ಯಾಯಾಲಯದ ಆವರಣದಲ್ಲಿ ನಡೆಯಿತು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಮಹಮ್ಮದ್ ಇಮ್ತಿಯಾಜ್ ಅಹ್ಮಮದ್, ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶೆ ಪ್ರತಿಭಾ ಡಿ.ಎಸ್, ವಕೀಲರ ಸಂಧ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಅಧಿವಕ್ತ ಪರಿಷತ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ರೋಶನ್ ಡಿಸೋಜ, ರೋಟರಿ ಕ್ಲಬ್ ಟೌನ್ ಅಧ್ಯಕ್ಷ ಉಮೇಶ್ ನಿರ್ಮಲ್, ಕಾರ್‍ಯದರ್ಶಿ ಜಯರಾಜ್ ಎಲ್. ಬಂಗೇರ ಮತ್ತಿತರರು ಪಾಲ್ಗೊಂಡರು.
ಈ ಸಂದರ್ಭ ಪಾಲ್ಗೊಂಡ ಎಲ್ಲ ಅತಿಥಿಗಳು ನ್ಯಾಯಾಲಯ ಆವರಣದಲ್ಲಿದ್ದ ಕಸವನ್ನು ತೆಗೆದು ಸ್ವಚ್ಛಗೊಳಿಸುವ ಮೂಲಕ ಜಾಗೃತಿ ಮೂಡಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…