ಬಂಟ್ವಾಳ ತಾಲೂಕು ಪಂಚಾಯತ್ ನ ಸಂಗಬೆಟ್ಟು ಕ್ಷೇತ್ರಕ್ಕೆ ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ.
ಅ.13ರಂದು ಜಿಲ್ಲಾಧಿಕಾರಿ ಅವರು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅ.16 ರಂದು ನಾಮಪತ್ರ ಸಲ್ಲಿಕೆ, ಅ.17ರಂದು ನಾಮಪತ್ರ ಪರಿಶೀಲನೆ, 20ರಂದು ಉಮೇದುವಾರಿಕೆ ಹಿಂತೆಗೆಯುವಿಕೆ, ಮತ್ತು 28ರಂದು ಬೆಳಿಗ್ಗೆ 7ರಿಂದ ಸಂಜೆ 5ಗಂಟೆಯವರೆಗೆ ಮತದಾನ ನಡೆಯಲಿದೆ. ಅ. 31ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕಾ ಕಾರ್ಯವು ಬಂಟ್ವಾಳ ತಾಲೂಕು ಕೇಂದ್ರದಲ್ಲಿ ನಡೆಯಲಿದೆ.
ಸಂಗಬೆಟ್ಟು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದಿದ್ದ ಪ್ರಭಾಕರ ಪ್ರಭು ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಪಕ್ಷಕ್ಕೆ ಮತ್ತು ತಾಪಂ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆ ಹೊಂದಿದ್ದರು.