ಬಂಟ್ವಾಳ

ರೋಟರಿ ಕ್ಲಬ್ ನಲ್ಲಿ ವಿಶೇಷ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರ, ರೋಟರಿ ಕ್ಲಬ್ ಬಂಟ್ವಾಳ, ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ಸಹಯೋಗದಲ್ಲಿ ಸಮಗ್ರ ಶಿಕ್ಷಣ ಅಭಿಯಾನದಡಿ ವಿಶೇಷ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ಬಿ.ಸಿ.ರೋಡಿನ ರೋಟರಿ ಕ್ಲಬ್ ಬಂಟ್ವಾಳದಲ್ಲಿ ನಡೆಯಿತು.

ಜಾಹೀರಾತು

ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಉದ್ಘಾಟಿಸಿ ಮಾತನಾಡಿ, ವಿಶೇಷ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದು, ಅವರಿಗೆ ಧೈರ್ಯ ತುಂಬುವ ಕೆಲಸವಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಕುಂದುಕೊರತೆಗಳನ್ನು ಪರಿಶೀಲಿಸಿ ಅವರಿಗೆ ಅಗತ್ಯವಾದ ವ್ಯವಸ್ಥೆ ಗಳನ್ನು ಕಲ್ಪಿಸುವ ಕೆಲಸ ಇಲಾಖೆ ಯಿಂದ ಸಂಘಸಂಸ್ಥೆಗಳ ಮೂಲಕ ಆಗಬೇಕಾಗಿದೆ.

ನ್ಯೂನತೆಗಳನ್ನು ಗಮನಿಸಿ ಅವರಿಗೆ ಜೀವನದಲ್ಲಿ ಶಕ್ತಿ ತುಂಬುವ ಕೆಲಸದ ಜೊತೆ ಇಂಥ ವೈದ್ಯಕೀಯ ಕಾರ್ಯಕ್ರಮ ಗಳನ್ನು ಆಯೋಜಿಸುವ. ದುರ್ಬಲ ವರ್ಗದ ಜನರಿಗೆ ಸಹಾಯ ಮಾಡಲು ಎಲ್ಲರೂ ಮುಂದೆ ಬರಬೇಕು ಎಂದರು.

ಜಾಹೀರಾತು

ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇನಾವು ಮಾತನಾಡಿ ಮಕ್ಕಳಲ್ಲಿ ರುವ ಪ್ರತಿಭೆಯನ್ನು ಗುರುತಿಸುವ ಕೆಲಸ ನಮ್ಮೆಲ್ಲರಿಂದ ಆಗಬೇಕಾಗಿದೆ ಎಂದರು. ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ನ ಅಧ್ಯಕ್ಷ ಅವಿಲ್ ಮಿನೇಜಸ್ ಮಾತನಾಡಿ ವಿಶೇಷ  ಮಕ್ಕಳ ಕಡೆಗಣನೆ ಸಲ್ಲದು ಎಂದರು. ರೋಟರಿ ಲೊರೆಟ್ಟೋ ಹಿಲ್ಸ್ ನ  ನಿಕಟ ಪೂರ್ವ ಕಾರ್ಯದರ್ಶಿ ಪ್ರಭಾಕರ ಪ್ರಭು ಮಾತನಾಡಿ ವಿಶೇಷ ಮಕ್ಕಳ ನ್ನು ಮುಖ್ಯವಾಹಿನಿ ಗೆ ತರುವಲ್ಲಿ ಸಮಾಜದ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಹೇಳಿದರು. ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ ಇಂತಹ ಸಂದರ್ಭ ಅನುಕಂಪ ಬದಲು ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುವ ಎಂದರು. ರೋಟರಿ ಕ್ಲಬ್ ಕಾರ್ಯದರ್ಶಿ ವಸಂತ್ ರಾವ್ , ಡಿ.ಐ.ಇ.ಆರ್.ಟಿ. ಮೇನುಕಾದೇವಿ, ಸಮನ್ವಯ ಅಧಿಕಾರಿ ರಾದಾಕ್ರಷ್ಣ ಭಟ್ ,  ಡಿ.ಡಿ.ಆರ್.ಸಿ.ಯ ನೋಡೆಲ್ ಅಧಿಕಾರಿ ಸುಬ್ರಮಣಿ, ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ನ ಸದಸ್ಯರಾದ ಆಂಟನಿ ಸ್ವಿಕೇರ, ಪ್ರಿತಾ ಸ್ವಿಕೇರ, ಸುರೇಶ್ ಶೆಟ್ಟಿ ಸಿದ್ದಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕಿನ ವಿಶೇಷ ಮಕ್ಕಳ ನೊಡೆಲ್ ಅಧಿಕಾರಿ ಸುರೇಖಾ ಕಾರ್ಯಕ್ರಮ ನಿರೂಪಿಸಿದರು. ಸಮನ್ವಯ ಆಧಿಕಾರಿ ರಾಧಾಕ್ರಷ್ಣ ಭಟ್ ಸ್ವಾಗತಿಸಿದರು. ರಾಮಚಂದ್ರ ಶೆಟ್ಟಿಗಾರ್ ಧನ್ಯವಾದ ನೀಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ