ಬಂಟ್ವಾಳ

ಜಕ್ರಿಬೆಟ್ಟಿನಲ್ಲಿ ಬಸ್ – ಬೈಕ್ ಡಿಕ್ಕಿಯಾಗಿ ಇಬ್ಬರು ಸಾವು

ಬಂಟ್ವಾಳ ತಾಲೂಕಿನ ಮಂಗಳೂರು – ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯ ಜಕ್ರಿಬೆಟ್ಟು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ವೊಂದು ಬೈಕ್ ಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿದ್ಧಾರೆ.

ಜಾಹೀರಾತು

ಮಂಗಳೂರು ಕುಡುಪು ನಿವಾಸಿ ಚರಣ್ (18)  ಮತ್ತು ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ದಂಡೆಗೋಳಿ ನಿವಾಸಿ ಮಹಮದ್ ನೌಶಾದ್ (18) ಸಾವನ್ನಪ್ಪಿದವರು.

ಬಿ.ಸಿ.ರೋಡಿನಿಂದ  ಕಾರಿಂಜ ದೇವಸ್ಥಾನದ ಕಡೆ ತೆರಳುತ್ತಿದ್ದ ವೇಳೆ  ಜಕ್ರಿಬೆಟ್ಟು ಎಂಬಲ್ಲಿ ವಿರುದ್ಧ ದಿಕ್ಕಿನಲ್ಲಿ  ಬಂದ ಕೆಎಸ್ಸಾರ್ಟಿಸಿ ಬಸ್ ನಿಯಂತ್ರಣ ತಪ್ಪಿ ಬೈಕ್ ಗೆ ಢಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯ ರಭಸಕ್ಕೆ ಬೈಕ್ ಸವಾರಿಬ್ಬರು ಬಸ್ ನ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯ ನಿವಾಸಿಗಳು ಹರಸಾಹಸ ಪಟ್ಟು ಬಸ್ ನಡಿಯಲ್ಲಿ ಸಿಲುಕಿ ಕೊಂಡ ಚಿಂತಾಜನಕ ಸ್ಥಿತಿಯಲ್ಲಿದ್ದ ಸವಾರರನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂದ ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ