ಜಿಲ್ಲಾ ಸುದ್ದಿ

ಕಟೀಲು ಕ್ಷೇತ್ರದಲ್ಲಿ ನವರಾತ್ರಿ ಉತ್ಸವ: ವಾಹನ ಸಂಚಾರದಲ್ಲಿ ಮಾರ್ಪಾಡು

ಅಕ್ಟೋಬರ್ 10 ರಿಂದ ಅಕ್ಟೋಬರ್ 18 ರವರೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ಲಲಿತ ಪಂಚಮಿಯ ಪೂಜಾ ಕಾರ್ಯಕ್ರಮ, ವಾಹನ ಪೂಜೆ ಮತ್ತು ಆಯುಧ ಪೂಜೆ ಇತ್ಯಾದಿ ಮಹೋತ್ಸವ ನಡೆಯಲಿರುವುದರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಿ ಬದಲಿ ವ್ಯವಸ್ಥೆ ಸೂಚಿಸಿ  ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರು ಆದೇಶಿಸಿದ್ದಾರೆ.
ಮಂಗಳೂರು ಬಜಪೆ ಕಡೆಯಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆಯಂಗಡಿ ಕ್ರಾಸ್‍ನಿಂದ ಏಕಮುಖವಾಗಿ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು.  ಕಟೀಲಿನಿಂದ ಮಂಗಳೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ದೇವಸ್ಥಾನದ ಪದವಿ ಪೂರ್ವ ಕಾಲೇಜು ಮೈದಾನದ ಮೂಲಕ ವಿಜಯ ಬ್ಯಾಂಕ್ ಎದುರುಗಡೆ ರಸ್ತೆಯಲ್ಲಿ ಚಲಿಸಿ, ಬಜಪೆ-ಮಂಗಳೂರು ಕಡೆಗೆ ಹೋಗುವುದು. ಕಾರು ಹಾಗೂ ಇತರ ವಾಹನಗಳಿಗೆ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್‍ಗೆ ಹೆಚ್ಚಿನ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್ಸುಗಳು ಎಂದಿನಂತೆ ಬಸ್ಸು ನಿಲ್ದಾಣಕ್ಕೆ ಬಂದು ಹೋಗುವುದು. ದೇವಸ್ಥಾನದ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಿಂದ ವಿಜಯಬ್ಯಾಂಕ್ ವರೆಗಿನ ಇಕ್ಕೆಲಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣ ನಿಷೇಧಿಸಿದೆ.
ಈ ನಿರ್ಬಂಧನೆಗಳು, ಪೊಲೀಸ್ ವಾಹನಗಳು ಹಾಗೂ ತುರ್ತು ಸೇವೆಯ ವಾಹನಗಳಿಗೆ ಅನ್ವಯಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.