ಬಂಟ್ವಾಳ

15ರಂದು ಎಪಿಎಂಸಿ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ

ಬಂಟ್ವಾಳ ಎಪಿಎಂಸಿಯ  ಎರಡನೇ ಅವಧಿಯ 20 ತಿಂಗಳ ನೂತನ ಅಧ್ಯಕ್ಷ ,ಉಪಾಧ್ಯಕ್ಷರ ಚುನಾವಣೆ ಅ.15 ರಂದು ಎಪಿಎಂಸಿ ಕಚೇರಿಯಲ್ಲಿ ನಡೆಯಲಿದೆ ಎಂದು ಬಂಟ್ವಾಳ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.

ಮೊದಲ 20 ತಿಂಗಳ‌ ಅವಧಿಗೆ ನಾಮನಿರ್ದೇಶಿತರ ಬೆಂಬಲದಿಂದ ಕಾಂಗ್ರೆಸ್ ನ ಪದ್ಮನಾಭ ರೈ ಅಧ್ಯಕ್ಷರಾಗಿ,ಚಂದ್ರಶೇಖರ ಪೂಜಾರಿ ಉಪಾಧ್ಯಕ್ಷರಾಗಿದ್ದರು.ಇವರ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ಮುಂದಿನ ಎರಡನೇ ಅವಧಿಗೆ ನೂತನ ಅಧ್ಯಕ್ಷ ,ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

13 ಸದಸ್ಯ ಬಲವನ್ನು ಹೊಂದಿರುವ ಬಂಟ್ವಾಳ ಎಪಿಎಂಸಿಯಲ್ಲಿ 7 ಬಿಜೆಪಿ,6 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ರಾಜ್ಯದಲ್ಲಿ ಸರಕಾರ ಬದಲಾವಣೆಯ ಹಿನ್ನಲೆಯಲ್ಲಿ  ಈ ಹಿಂದಿನ ಮೂವರು ನಾಮನಿರ್ದೇಶಿತರ ಅವಧಿಯು ಮುಗಿದಿದ್ದು, ಸದ್ಯ ನೂತನ ನಾಮನಿರ್ದೇಶಿತ ಸದಸ್ಯರ ಆಯ್ಕೆ ಆಗಿಲ್ಲ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ