ಒಡಿಶಾದ ಗಂಜಾಂ ಜಿಲ್ಲೆಯ ಗೋಪಾಲ್ಪುರದಲ್ಲಿ ಇಂದು ಮುಂಜಾನೆಯಿಂದ ತೀವ್ರ ತರವಾದ ಗಂಟೆಗೆ 126-140 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದಿಂದಾಗಿ ಅನೇಕ ಕಡೆಗಳಲ್ಲಿ ಭೂ ಕುಸಿತ ಉಂಟಾಗಿದೆ. ಚಂಡಮಾರುತದಿಂದ ಹಲವೆಡೆ ಅಪಾರ ಪ್ರಮಾಣದ ಭೂಮಿ ಹಾನಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಚಂಡ ಬಿರುಗಾಳಿಯಿಂದಾಗಿ ಅನೇಕ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ಕೆಲವು ಮನೆಗಳಿಗೆ ಹಾನಿಯಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಿಮಾನ ಮತ್ತು ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರು ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಂಧ್ರಪ್ರದೇಶದಲ್ಲೂ ಚಂಡಮಾರುತದ ಪರಿಣಾಮ ಎದುರಾಗಿದೆ. ಕಾಳಿಂಗಪಟ್ಟಣಂನಲ್ಲಿ ಗಂಟೆಗೆ 56 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿದ್ದ 3 ಲಕ್ಷಕ್ಕೂ ಅಧಿಕ ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.ಚಂಡಮಾರುತದಿಂದ ಹಲವೆಡೆ ಭಾರೀ ಪ್ರಮಾಣದಲ್ಲಿ ಹಾನಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಆತಂಕ ವ್ಯಕ್ತಪಡಿಸಿದರೂ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ ಚಂಡಮಾರುತದ ತೀವ್ರತೆ ತಗ್ಗುವ ಸಾಧ್ಯತೆಯೂ ಇದೆ.
ಗೋಪಾಲ್ಪುರದಲ್ಲಿ ಗಂಟೆಗೆ 126 ಕಿ. ಮೀ. ಆಂಧ್ರಪ್ರದೇಶದ ಕಾಳಿಂಗಪಟ್ಟಣ್ಣಂನಲ್ಲಿ ಗಂಟೆಗೆ 56 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿರುವ ಬಗ್ಗೆ ವರದಿಯಾಗಿದೆ. ತಿತ್ಲಿ ಚಂಡಮಾರುತದ ಪರಿಣಾಮ ಗಂಜಾಂ, ಗಜಪತಿ, ಪೂರಿ, ಕುರ್ದಾ, ಜಗತ್ ಸಿಂಗ್ ಪುರ್ ಮೊದಲಾದ ಐದು ಜಿಲ್ಲೆಗಳಲ್ಲಿ ಬೀರುಗಾಳಿ ಸಹಿತ ಮಳೆಯಾಗುತ್ತಿದ್ದು, ಭೂ ಕುಸಿತ ಪ್ರಕ್ರಿಯೆ ಆರಂಭವಾಗಿದೆ. ತೀವ್ರ ತರ ಚಂಡಮಾರುತದಿಂದಾಗಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ ಬಿದಿದ್ದು, ಕೆಲ ಮನೆಗಳಿಗೆ ಹಾನಿಯಾಗಿದೆ. ಗೋಪಾಲ್ಪುರ , ಮೊದಲಾದ ಕಡೆಗಳಲ್ಲಿ ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ.
Be the first to comment on "ಒಡಿಶಾ ಕರಾವಳಿಗೆ ಅಪ್ಪಳಿಸಿದ ತಿತ್ಲಿ ಚಂಡಮಾರುತ, ಹಲವೆಡೆ ಹಾನಿ"