ವಿದ್ಯಾರ್ಥಿಗಳು ದೊಡ್ಡ ಕನಸನ್ನು ಹಾಗೂ ಗುರಿಯನ್ನು ಇಟ್ಟುಕೊಳ್ಳಬೇಕು ಹಾಗೂ ಅದನ್ನು ಈಡೇರಿಸಲು ಪ್ರಯತ್ನಿಸಬೇಕು. ಎಂದು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಬುಧವಾರ ರಾತ್ರಿ ಸರಕಾರಿ ಪ್ರೌಢ ಶಾಲೆ ಕೊಯಿಲದಲ್ಲಿ ನಡೆದ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಮಾತನಾಡಿ ವಿದ್ಯಾರ್ಥಿಗಳು ಸಾಮರಸ್ಯದ ಮನೋಭಾವನೆಯನ್ನು ಮೈಗೂಡಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ತಮ್ಮದಾಗಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿಗಳಾಗಿ ಎಸ್.ವಿ.ಎಸ್. ಕಾಲೇಜಿನ ಉಪಪ್ರಾಂಶುಪಾಲೆ ಡಾ. ಎಚ್.ಆರ್. ಸುಜಾತ ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ರಾಯಿ ಗ್ರಾ.ಪಂ. ಅಧ್ಯಕ್ಷ ದಯಾನಂದ ಸಪಲ್ಯ, ರಾಯಿ ಗ್ರಾ.ಪಂ. ಸದಸ್ಯೆ ಕುಸುಮಾ, ಸರಕಾರಿ ಪ್ರೌಢ ಶಾಲೆ ಕೊಯಿಲದ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು, ಮಾಜಿ ತಾ.ಪಂ. ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ಸ.ಪ್ರೌಢ ಶಾಲೆ ಕೊಯಿಲದ ಅಧ್ಯಕ್ಷ ಸಂತೋಷ್ ಕುಮಾರ್ ರಾಯಿಬೆಟ್ಟು, ಕೊಯಿಲ ಶಾಲೆಯ ಮುಖ್ಯೋಪಾದ್ಯಾಯ ಸುಧೀರ್ ಜಿ. ಕೊಯಿಲ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವೇದಾನಂದ ಕಾರಂತ, ರಾಯಿ ಹಾಲುತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಭಂಡಾರಿ ಉಪಸ್ಥಿತರಿದ್ದರು.
ಶಿಬಿರಾರ್ಥಿಗಳು ಪ್ರಾರ್ಥಿಸಿದರು. ಎನ್‌ಎಸ್‌ಎಸ್ ಶಿಬಿರಾಧಿಕಾರಿ ಕವಿತಾ ಯಾದವ್ ಸ್ವಾಗತಿಸಿದರು. ಸಹಶಿಬಿರಾಧಿಕಾರಿ ಶಾಲಿನಿ ಬಿ. ಧನ್ಯವಾದ ನೆರವೇರಿಸಿದರು. ಸಹಶಿಬಿರಾಧಿಕಾರಿ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು. ಸಹಶಿಬಿರಾಧಿಕಾರಿಗಳಾದ ಅನಿತಾ ಜೇಕಬ್, ಉಪನ್ಯಾಸಕರಾದ ಭಾರತಿ ವಸಂತಕುಮಾರ್, ದೀಪಿಕಾಪ್ರಿಯಾ, ವಿಜೇತಾ ನಾಯಕ್ ಸಹಕರಿಸಿದರು.