ಬಂಟ್ವಾಳ

ರಾಯಿ: ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

ಮಹಾತ್ಮಾ ಗಾಂಧೀಜಿ ಅವರ ಕನಸಿನಂತೆ ಕಳೆದ 50 ವರ್ಷಗಳ ಹಿಂದೆ ಆರಂಭಗೊಂಡ ಎನ್‌ಎಸ್‌ಎಸ್ ಶಿಬಿರಗಳ ಮೂಲಕ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಸೌಹಾರ್ದತೆಯಿಂದ ಸ್ವಾಭಿಮಾನದ ಬದುಕು ರೂಪಿಸುವ ಮನೋಭಾವ ಬೆಳೆಯುತ್ತದೆ ಎಂದು ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಹೇಳಿದ್ದಾರೆ.

ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಕ್ಯಪದವು ಎಲ್‌ಸಿಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕ ವತಿಯಿಂದ ಬುಧವಾರ ಸಂಜೆ ಆರಂಭಗೊಂಡ ವಾರ್ಷಿಕ ವಿಶೇಷ ಶಿಬಿರದಲ್ಲಿ ಶಿಬಿರಾರ್ಥಿಗಳು ನಿರ್ಮಿಸಿದ ಕೃತಕ ಕಾರಂಜಿಯನ್ನು ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ವೀಕ್ಷಿಸಿದರು.

ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಕ್ಯಪದವು ಎಲ್‌ಸಿಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕ ವತಿಯಿಂದ ಬುಧವಾರ ಸಂಜೆ ಆರಂಭಗೊಂಡ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಾಹೀರಾತು

ಕಾಲೇಜಿನ ಪ್ರಾಂಶುಪಾಲ ಪ್ರವೀಣ್ ಎ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ’ಎನ್‌ಎಸ್‌ಎಸ್ ಶಿಬಿರದಿಂದ ವಿದ್ಯಾರ್ಥಿಗಳು ಒಟ್ಟಾಗಿ ಶ್ರಮಿಸುವ ಮೂಲಕ ಸೇವಾ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಗೈಲ್ ಇಂಡಿಯನ್ ಸ್ಪೀಡ್ ಸ್ಟಾರ್ ರಾಜ್ಯ ನಿರ್ದೇಶಕ ರಮೇಶ್ ಕೆ., ರಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಂಜುಳಾ ಸದಾನಂದ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ರಮೇಶ ನಾಂiiಕ್ ರಾಯಿ, ಸಮೂಹ ಸಂಪನ್ಮೂಲ ವ್ಯಕ್ತಿ ಚಿನ್ನಸ್ವಾಮಿ, ಮುಖ್ಯಶಿಕ್ಷಕ ಜಯರಾಮ ಪಡ್ರೆ, ಕೊಯಿಲ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ವೇದಾನಂದ ಕಾರಂತ್, ರಾಯಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜಿ.ಸುಂದರ ಭಂಡಾರಿ ಮತ್ತಿತರರು ಶುಭ ಹಾರೈಸಿದರು.

ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪುಷ್ಪಲತಾ, ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಸದಸ್ಯರಾದ ರಾಘವ ಅಮೀನ್, ಪದ್ಮನಾಭ ಗೌಡ, ಯಶೋಧ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಮೇಶ ಗೌಡ, ಪ್ರಗತಿಪರ ಕೃಷಿಕ ಎಂ.ಮಹದೇವ ಗೌಡ, ಚಿದಾನಂದ ರೈ ಕಕ್ಯ ಮತ್ತಿತರರು ಇದ್ದರು.

ಜಾಹೀರಾತು

ಯೋಜನಾಧಿಕಾರಿ ಶಿವರಾಜ್ ಗಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಮೈಸೂರಿನ ಎಸ್‌ಎಲ್‌ವಿ ಬುಕ್ ಏಜೆನ್ಸಿ ವತಿಯಿಂದ ೬೦ ಮಂದಿ ಶಿಬಿರಾರ್ಥಿಗಳಿಗೆ ಉಚಿತ ಟಿ-ಶರ್ಟ್ ಒದಗಿಸಿದ್ದಾರೆ ಎಂದು ತಿಳಿಸಿದರು.ಉಪನ್ಯಾಸಕಿ ದಿವ್ಯಶ್ರೀ ವಂದಿಸಿದರು. ಉಪನ್ಯಾಸಕಿ ವಿಂದ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ