ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಆರಂಭಗೊಂಡ ಕಾಲೇಜು ಸುವರ್ಣ ಮಹೋತ್ಸವವನ್ನು ಆಚರಿಸಿ, ಅದರ ಸವಿನೆನಪಿನ ಸಂಚಿಕೆ ಸುವರ್ಣ ಸುಪ್ರಭಾವು ಬಿಡುಗಡೆಗೊಂಡಿದೆ. ಇದು ಸಂಸ್ಥೆಯ ಸಾಧನೆಯ ಹೆಜ್ಜೆಹಾದಿಯನ್ನು ನೆನಪಿಸುವ ಶಾಶ್ವತ ಸಂಚಿಕೆಯಾಗಿದೆ ಎಂದು ಶ್ರೀ ವೆಂಕಟರಮಣ ಸ್ವಾಮೀ ಕಾಲೇಜುಗಳ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಹೇಳಿದರು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನಲ್ಲಿ ನಡೆದ ಸುವರ್ಣ ಮಹೋತ್ಸವ ನೆನಪಿನ ಸಂಚಿಕೆ-ಸುವರ್ಣ ಸುಪ್ರಭಾ ಬಿಡುಗಡೆಗೊಳಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪತ್ರಕರ್ತ ರಾಜಾ ಬಂಟ್ವಾಳ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಮಾತನಾಡಿದರು. ಶ್ರೀ ವೆಂಕಟರಮಣ ಸ್ವಾಮೀ ಪದವಿ ಕಾಲೇಜು ಪ್ರಾಂಶುಪಾಲ ಡಾ.ಪಾಂಡುರಂಗ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಪ್ರಾಂಶುಪಾಲೆ ಡಾ.ಸುಜಾತ ಎಚ್.ಆರ್., ಸ್ವಾಗತಿಸಿದರು. ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ., ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿ ಭರತ್ ಪ್ರಾರ್ಥಿಸಿದರು. ಉಪನ್ಯಾಸಕ ಚೇತನ್ ಮುಂಡಾಜೆ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಎಸ್.ವಿ.ಎಸ್ ಕಾಲೇಜುಗಳ ಸುವರ್ಣ ಮಹೋತ್ಸವ ನೆನಪಿನ ಸಂಚಿಕೆ ಬಿಡುಗಡೆ"