ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ಬಂಟ್ವಾಳ ಉಪಸಮಿತಿ ವಾರ್ಷಿಕ ಮಹಾಸಭೆ ಬಿ.ಸಿ.ರೋಡ್ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಜರಗಿತು. ಬಂಟ್ವಳ ಉಪಸಮಿತಿ ಅಧ್ಯಕ್ಷ ಪಿ.ಸುಬ್ರಹ್ಮಣ್ಯ ರಾವ್ ಅಧ್ಯಕ್ಷತೆ ವಹಿಸಿದ್ದರು.
ದ.ಕ.ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಶಿವಕುಮಾರ್ ಪೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಶಾಲ ಪೂಜಾರಿ, ಕೇಂದ್ರ ಸಮಿತಿ ಬೆಂಗಳೂರಿನ ಸುಂದರ ಗೌಡ ಎಚ್., ಮೆಸ್ಕಾಂ ಪ್ರತಿನಿಧಿ ಲಕ್ಷ್ಮಿನಾರಾಯಣ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಲಿಂಗಪ್ಪ ಕುಲಾಲ್, ಉಪಾಧ್ಯಕ್ಷ ಹಾಜಿ. ಇಬ್ರಾಹಿಂ, ಸಂಘಟನಾ ಕಾರ್ಯದರ್ಶಿ ಎ.ಎಚ್.ಅಬ್ದುಲ್ ಸಲಾಂ ಉಪಸ್ಥಿತರಿದ್ದರು.
ಕಾರ್ಯಕಾರಿ ಸಮಿತಿ ಸದಸ್ಯ ಪದ್ಮನಾಭ ಮಯ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಎನ್.ಎ.ಯೂಸುಫ್ ವಾರ್ಷಿ ವರದಿ ಮಂಡಿಸಿದರು. ಬಂಟ್ವಾಳ ಉಪಸಮಿತಿ ಕೋಶಾಧಿಕಾರಿ ಪರಮೇಶ್ವರ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಜತೆ ಕಾರ್ಯದರ್ಶಿ ಸ್ಟೇನಿ ಡಿ’ ಕುನ್ನ ವಂದಿಸಿದರು. ಇಬ್ರಾಹಿಂ ಆಯಿಶಾ ಕಾರ್ಯಕ್ರಮ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…