ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಠಾಣಾ ಪೋಲೀಸರು ಓರ್ವನನ್ನು ಬಂಧಿಸಿದ್ದಾರೆ. ತಾಲೂಕಿನ ಸಜೀಪನಡು ನಿವಾಸಿ ಅಜೀಜ್ (23) ಆರೋಪಿ. ಗುಡ್ಡೆ ಅಂಗಡಿ ಯ ಶಾರದ ಸರ್ವೀಸ್ ಸ್ಟೇಷನ್ ನ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಪೋಲೀಸರು ಬಂಧಿಸಿದ್ದಾರೆ.
ಆ.11 ರಂದು ರಾತ್ರಿ ಸರ್ವೀಸ್ ಸ್ಟೇಷನ್ ನಿಂದ ಬೈಕ್ ಕಳವಾಗಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಂಟ್ವಾಳ ಎ.ಎಸ್.ಪಿ.ಹ್ರಷಿಕೇಶ್ ಸೋನಾವಣೆ ಅವರ ಮಾರ್ಗದರ್ಶನದಂತೆ ಬಂಟ್ವಾಳ ವೃತ್ತನಿರೀಕ್ಷಕ ನಾಗರಾಜ್ ಟಿ.ಡಿ. ನಿರ್ದೇಶನ ದಲ್ಲಿ ಬಂಟ್ವಾಳ ನಗರ ಠಾಣಾ ಎಸ್ ಐ ಚಂದ್ರಶೇಖರ ಹಾಗೂ ಅಪರಾಧ ವಿಭಾಗದ ಎಸ್.ಐ.ಹರೀಶ್ ನೇತೃತ್ವದಲ್ಲಿ ಎ.ಎಸ್.ಐ.ಸಂಜೀವ , ಸಿಬ್ಬಂದಿ ಗಳಾದ ಸುರೇಶ್ ಪಡಾರ್, ಜಮೀರ್, ಕುಮಾರ್ ಎಚ್.ಕೆ, ಮಲಿಕ್ , ಕರೀಂ ಹಾಗೂ ಚಾಲಕ ವಿಜಯ ಕಾರ್ಯಚರಣೆ ನಡೆಸಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…