ವಕೀಲರ ಸಂಘ , ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ನ್ಯಾಯಾಲಯದ ಆವರಣದಲ್ಲಿ ವಿಶ್ವ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಮ್ಮದ್ ಇಮ್ತಿಯಾಜ್ ಅಹ್ಮದ್ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ನ್ಯಾಯವಾದಿಗಳಾದ ರಮೇಶ್ ಉಪಾಧ್ಯಾಯ ಮತ್ತು ಪ್ರಸಾದ್ ಕುಮಾರ್ ರೈ ಮಾಹಿತಿ ನೀಡಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮಲ್ಲಿಕಾ , ನ್ಯಾಯವಾದಿ ವಿರೇಂದ್ರ.ಎಂ.ಸಿದ್ದಕಟ್ಟೆ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…