ಸಂಗಬೆಟ್ಟು ಉಪಚುನಾವಣೆಗೆ ದಿನಗಣನೆ: ಆಡಳಿತದಿಂದ ಸಿದ್ಧತೆ, ಅಭ್ಯರ್ಥಿಗಳ ಭರ್ಜರಿ ಪ್ರಚಾರ

ಅ. 28ರಂದು ನಡೆಯುವ ಸಂಗಬೆಟ್ಟು ತಾಲೂಕು ಪಂಚಾಯತ್ ಉಪಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಬಿ.ಸಿ.ರೋಡಿನ ಮಿನಿವಿಧಾನಸೌಧದಲ್ಲಿ ಇವಿಎಂ ಮತಯಂತ್ರ ಅಳವಡಿಕೆ ಹಾಗೂ ಪರಿಶೀಲನಾ ಕಾರ್ಯ ನಡೆಯಿತು.

ಜಾಹೀರಾತು

ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಚುನಾವಣಾಧಿಕಾರಿ ನಾರಾಯಣ ಶೆಟ್ಟಿ, ಮಾಸ್ಟರ್ ಟ್ರೈನರ್ ನಾರಾಯಣ ಭಂಡಾರಿ, ಸಹಾಯಕ ಚುನಾವಣಾಧಿಕಾರಿ ಲಕ್ಷ್ಮಣ್, ಮತಗಟ್ಟೆಯ ಸೆಕ್ಟರ್ ಅಧಿಕಾರಿ ಮತ್ತಡಿ ಇವಿಎಂ ಮತಯಂತ್ರ ಅಳವಡಿಕಾ ಕಾರ್ಯದಲ್ಲಿ ತೊಡಗಿಕೊಂಡರು.

ಒಟ್ಟು 10 ಬೂತ್‌ಗಳಲ್ಲಿ ಚುನಾವಣೆಯಲ್ಲಿ ನಡೆಯಲಿದೆ. ಎರಡು ಸಾಮಾನ್ಯ ಮತಗಟ್ಟೆಗಳನ್ನು ಹೊರತು ಪಡಿಸಿದರೆ ಉಳಿದ ೮ ಮತಗಳು ಸೂಕ್ಷ್ಮ ಮತಗಟ್ಟೆಗಳಿವೆ ಎಂದು ತಹಶೀಲ್ದಾರ್ ಅವರು ಮಾಹಿತಿ ನೀಡಿದರು.

ಸಂಗಬೆಟ್ಟು ಕ್ಷೇತ್ರದಲ್ಲಿ 4685 ಪುರುಷರು, 4767 ಮಹಿಳೆಯರು ಸೇರಿ ಒಟ್ಟು 9453 ಮತದಾರರು ತಮ್ಮ ಹಕ್ಕನ್ನು ಚಲಾಯಿಸುವರು. ಚುನಾವಣೆಗೆ ತಾಲೂಕಾಳಿತ ಸಕಲ ಪೂರ್ವತಯಾರಿಯನ್ನು ಮಾಡಿಕೊಂಡಿದ್ದು, ಶಾಂತ ಮತದಾನಕ್ಕೆ ಸಿದ್ಧತೆಯನ್ನು ನಡೆಸಿದೆ ಎಂದು ತಹಶೀಲ್ದಾರ್ ಅವರು ಮಾಹಿತಿ ನೀಡಿದ್ದಾರೆ.

ಯಾಕಾಗಿ ಚುನಾವಣೆ?

ವಿಧಾನಸಭೆಯ ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ವಿಧಾನಸಭೆ ಚುನಾವಣೆ ಹತ್ತಿರ ಇದೆ ಎನ್ನುವಾಗ ಆಳುವ ಪಕ್ಷ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ, ಸ್ಥಳೀಯ ಶಾಸಕ ಬಿ.ರಮಾನಾಥ ರೈ ಜೊತೆಜೊತೆಗೇ ಇದ್ದ ಪ್ರಭಾಕರ ಪ್ರಭು ತಾಪಂ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದು ದೊಡ್ಡ ಸಂಚಲನ ಮೂಡಿಸಿತ್ತು.

                                            ಪ್ರಭಾಕರ ಪ್ರಭು

ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ನಲ್ಲಿ ಪಕ್ಷದ ಪ್ರಮುಖರ ಸಮ್ಮುಖ ಬಿಜೆಪಿ ಸೇರಿದ್ದ ಪ್ರಭಾಕರ ಪ್ರಭು, ಬಳಿಕ ರಾಜೇಶ್ ನಾಯ್ಕ್ ಅವರೊಂದಿಗೆ ಗುರುತಿಸಿಕೊಂಡರು.

ಅವರ ಈ ನಡೆಯಿಂದ ತೆರವಾಗಿದ್ದ ತಾಲೂಕು ಪಂಚಾಯತ್ ಸ್ಥಾನಕ್ಕೆ ಈಗ ಮತ್ತೆ ಉಪಚುನಾವಣೆಯ ಸನ್ನಿವೇಶ ಬಂದಿದೆ. ಅಕ್ಟೋಬರ್ 28ರಂದು ಓಟು, 31ರಂದು ಕೌಂಟಿಂಗ್.

                        ದಿನೇಶ ಸುಂದರ ಶಾಂತಿ

ವಿಶೇಷವೆಂದರೆ ಅಂದು ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದ ಪ್ರಭಾಕರ ಪ್ರಭು, ಈಗ ಕಮಲದ ಚಿಹ್ನೆಗೆ ಮತ ಯಾಚಿಸುತ್ತಿದ್ದಾರೆ. ಒಂದು ಕಾಲದಲ್ಲಿ ಅವರೊಂದಿಗೆ ಕಾಂಗ್ರೆಸ್ ಪಕ್ಷದಲ್ಲಿ ಓಡಾಡುತ್ತಿದ್ದ ಕುಕ್ಕಿಪ್ಪಾಡಿ ಗ್ರಾಪಂ ಅಧ್ಯಕ್ಷ ದಿನೇಶ ಸುಂದರ ಶಾಂತಿ ಕಾಂಗ್ರೆಸ್ ಪರವಾಗಿ ಅಭ್ಯರ್ಥಿಯಾಗಿ ಮತ ಯಾಚನೆ ಮಾಡುತ್ತಿದ್ದಾರೆ.

ವರಿಷ್ಠರ ದಂಡು:

ಬಿಜೆಪಿಯಿಂದ ಈಗಾಗಲೇ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಹಲವು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಸಭೆಗಳನ್ನು ನಡೆಸಿದ್ದರೆ, ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ತಾಪಂ ಸ್ಥಾನ ಉಳಿಸಲು ಶತಪ್ರಯತ್ನ ನಡೆಸುತ್ತಿದೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಂಗಬೆಟ್ಟು ಉಪಚುನಾವಣೆಗೆ ದಿನಗಣನೆ: ಆಡಳಿತದಿಂದ ಸಿದ್ಧತೆ, ಅಭ್ಯರ್ಥಿಗಳ ಭರ್ಜರಿ ಪ್ರಚಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*