ನಾಡಿನ ಎಲ್ಲ ಹುತಾತ್ಮರ ಜೀವನ ನಮಗೆ ಮಾರ್ಗದರ್ಶಕವಾಗಲಿ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದ್ದಾರೆ.
ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವತಿಯಿಂದ ಬಂಟ್ವಾಳ ಮಿನಿ ವಿಧಾನ ಸೌಧದ ತಹಶೀಲ್ದಾರ್ ರವರ ನ್ಯಾಯಾಲಯದ ಕೊಠಡಿಯಲ್ಲಿ ಮಂಗಳವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ದಾಸ್ಯ ಸಂಕಲೆಯಿಂದ ಹೊರಬರಲು ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿದರು ಎಂದು ಅವರು ಹೇಳಿದರು.ಮುಖ್ಯ ಅತಿಥಿಯಾಗಿ ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭ ಉಪತಹಶೀಲ್ದಾರ್ ವಾಸು ಶೆಟ್ಟಿ, ರಾಜೇಶ್ ನಾಯ್ಕ್, ಪ್ರಭಾರ ಉಪತಹಶೀಲ್ದಾರ್ ಸೀತಾರಾಮ, ಆಹಾರ ಶಾಖೆಯ ಶ್ರೀನಿವಾಸ್ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು, ತಾಲೂಕು ಕಚೇರಿ ಸಿಬಂದಿ ವರ್ಗ, ಗ್ರಾಮ ಕರಣಿಕರು,ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ ಸ್ವಾಗತಿಸಿದರು.