ಪೊಲಿಯೋ ವಿರುದ್ಧ ಜಾಗತಿಕ ಮಟ್ಟದಲ್ಲಿ ರೋಟರಿ ಅಭಿಯಾನ

ಪೊಲಿಯೋ ವಿರುದ್ಧ ಅಭಿಯಾನದಲ್ಲಿ ರೋಟರಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದೆ. ಜಾಗತಿಕ ಮಟ್ಟದಲ್ಲಿ ಪೊಲೀಯೋವನ್ನು ಶೂನ್ಯವಾಗಿಸಲು ಪ್ರಯತ್ನ ನಡೆದಿದೆ ಎಂದು ರೋಟರಿ ಜಿಲ್ಲೆ – 3181 ಇದರ ಜಿಲ್ಲಾ ಗವರ್ನರ್ ರೋಹಿನಾಥ್ ಪಾದೆ ಹೇಳಿದರು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ರೋಟರಿ ಗವರ್ನರ್ ಅಧಿಕೃತ ಭೇಟಿ ಸಮಾರಂಭದಲ್ಲಿ ಆಶಾಸ್ಪೂರ್ತಿ ಯೋಜನೆಯ ಸವಲತ್ತು ವಿತರಣೆ ಹಾಗೂ ರೋಟರಿ ಸಂತ್ರಸ್ತರ ನಿಧಿಗೆ ಒಂದು ಲಕ್ಷ ರೂಪಾಯಿ ದೇಣಿಗೆಯನ್ನು ಹಸ್ತಾಂತರ ಮಾಡಿ ಮಾತನಾಡಿದರು.

ರೋಟರಿ ಫೌಂಡೇಷನ್ ದೇಣಿಗೆಯನ್ನು ಜಾಗತಿಕ ಮಟ್ಟದಲ್ಲಿ ಬಡ ಜನರಿಗೆ ಆರೋಗ್ಯ ಸೇವೆ, ಶಾಶ್ವತ ಯೋಜನೆಗೆ, ಶೈಕ್ಷಣಿಕ ಅನುದಾನಕ್ಕೆ ಪಾರದರ್ಶಕತೆಯಿಂದ ವ್ಯವಹರಿಸುತ್ತಿರುವ ಜಗತ್ತಿನ ಅತಿ ದೊಡ್ಡ ಸಂಘಟನೆ ಎಂದು ಹೇಳಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ವಲಯ 4ರ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್, ವಲಯ ಸೇನಾನಿ ಸಂಜೀವ ಪೂಜಾರಿ ಗುರುಕೃಪ, ಕಾರ್ಯದರ್ಶಿ ನಾರಾಯಣ ಹೆಗ್ಡೆ, ರೋಟರಿ ಕ್ಲಬ್ ಬಂಟ್ವಾಳ ಇದರ ಅಧ್ಯಕ್ಷ ರಾದ ಮಂಜುನಾಥ್ ಆಚಾರ್ಯ ಉಪಸ್ತಿತರಿದ್ದರು. ಸಮಾರಂಭದ ಅಧ್ಯಕ್ಷತೆ ಯನ್ನು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಉಮೇಶ್ ನಿರ್ಮಲ್ ವಹಿಸಿದ್ದರು. ಕಾರ್ಯದರ್ಶಿ ಜಯರಾಜ್ ಎಸ್ ಬಂಗೇರ ಧನ್ಯವಾದ ಸಮರ್ಪಣೆ ಮಾಡಿದರು. ರಾಜಕುಮಾರ್ ಪ್ರಾಯೋಜಕರಾಗಿ ನಾವೂರು ಅಂಗನವಾಡಿಯ ಶೀಟ್ ಅಳವಡಿಕೆಗೆ ಸಹಾಯ ಧನ ನೀಡಿದರು .ರೋಟರಿ ಫೌಂಡೇಷನ್ ಗೆ ದಯಾನಂದ ಶೆಟ್ಟಿ ಹಾಗೂ ಶಂಕರ್ ಶೆಟ್ಟಿ ದೇಣಿಗೆ ನೀಡಿದರು.   ಆನ್ಸ್ ಕ್ಲಬ್ ಅಧ್ಯಕ್ಷರಾದ ಆಶಾಮಣಿ ಡಿ ರೈ 1 ಲಕ್ಷದ ದೇಣಿಗೆಯನ್ನು ಗವರ್ನರ್ ರಿಗೆ ಹಸ್ತಾಂತರ ಮಾಡಿದರು. ಕಾರ್ಯದರ್ಶಿ ಜಯರಾಜ್ ಎಸ್ ಬಂಗೇರ ಧನ್ಯವಾದ ಸಮರ್ಪಣೆ ಮಾಡಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪೊಲಿಯೋ ವಿರುದ್ಧ ಜಾಗತಿಕ ಮಟ್ಟದಲ್ಲಿ ರೋಟರಿ ಅಭಿಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*