ಕನ್ಯಾನ ಕೆಳಗಿನಪೇಟೆಯಲ್ಲಿ ಮಟ್ಕಾ ಅಡ್ಡೆಯೊಂದು ಕಾರ್ಯಾಚರಿಸುತ್ತಿರುವ ಕುರಿತು ಖಚಿತ ವರ್ತಮಾನದ ಮೇರೆಗೆ ಡಿಸಿಐಬಿ ಪೊಲೀಸ್ ತಂಡ ಗುರುವಾರ ದಾಳಿ ನಡೆಸಿದ್ದು, ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದೆ. ಇವರಿಂದ 4,140 ರೂ ನಗದು ಮತ್ತು ಮಟ್ಕಾ ಚೀಟಿಯನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳನ್ನು ಮುಂದಿನ ಕ್ರಮಕ್ಕಾಗಿ ವಿಟ್ಲ ಠಾಣೆಗೆ ಹಸ್ತಾಂತರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರವಿಕಾಂತೇಗೌಡ ಸೂಚನೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಸಜಿತ್ ವಿ.ಜೆ. ನಿರ್ದೇಶನದಂತೆ ಡಿಸಿಐಬಿ ಪೊಲೀಸ್ ನಿರೀಕ್ಷಕರಾದ ಸುನೀಲ್ ವೈ ನಾಯ್ಕ್ ನೇತೃತ್ವದ ತಂಡದಲ್ಲಿ ಸಿಬ್ಬಂದಿಯಾದ ನಾರಾಯಣ, ವಾಸು ನಾಯ್ಕ, ಲಕ್ಷ್ಮಣ ಕೆ.ಜಿ, ಪ್ರವೀಣ್ ಎಂ, ತಾರಾನಾಥ್, ಪ್ರವೀಣ್ ರೈ ಮತ್ತು ಶೋನ್‌ಶಾ ಭಾಗವಹಿಸಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…