ವಿಟ್ಲ

ಮಟ್ಕಾ ಅಡ್ಡೆ ಮೇಲೆ ಡಿಸಿಐಬಿ ಪೊಲೀಸರ ದಾಳಿ, ಇಬ್ಬರು ವಶಕ್ಕೆ

ಕನ್ಯಾನ ಕೆಳಗಿನಪೇಟೆಯಲ್ಲಿ ಮಟ್ಕಾ ಅಡ್ಡೆಯೊಂದು ಕಾರ್ಯಾಚರಿಸುತ್ತಿರುವ ಕುರಿತು ಖಚಿತ ವರ್ತಮಾನದ ಮೇರೆಗೆ ಡಿಸಿಐಬಿ ಪೊಲೀಸ್ ತಂಡ ಗುರುವಾರ ದಾಳಿ ನಡೆಸಿದ್ದು, ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದೆ. ಇವರಿಂದ 4,140 ರೂ ನಗದು ಮತ್ತು ಮಟ್ಕಾ ಚೀಟಿಯನ್ನು ವಶಪಡಿಸಿಕೊಳ್ಳಲಾಗಿದೆ.

ಜಾಹೀರಾತು

ಆರೋಪಿಗಳನ್ನು ಮುಂದಿನ ಕ್ರಮಕ್ಕಾಗಿ ವಿಟ್ಲ ಠಾಣೆಗೆ ಹಸ್ತಾಂತರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರವಿಕಾಂತೇಗೌಡ ಸೂಚನೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಸಜಿತ್ ವಿ.ಜೆ. ನಿರ್ದೇಶನದಂತೆ ಡಿಸಿಐಬಿ ಪೊಲೀಸ್ ನಿರೀಕ್ಷಕರಾದ ಸುನೀಲ್ ವೈ ನಾಯ್ಕ್‌ ನೇತೃತ್ವದ ತಂಡದಲ್ಲಿ ಸಿಬ್ಬಂದಿಯಾದ ನಾರಾಯಣ, ವಾಸು ನಾಯ್ಕ, ಲಕ್ಷ್ಮಣ ಕೆ.ಜಿ, ಪ್ರವೀಣ್ ಎಂ, ತಾರಾನಾಥ್‌, ಪ್ರವೀಣ್ ರೈ ಮತ್ತು ಶೋನ್‌ಶಾ ಭಾಗವಹಿಸಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ