ಮೆಲ್ಕಾರ್ ಮಹಿಳಾ ಪ ಪೂ ಕಾಲೇಜು ಹಾಗೂ ಪ ಪೂ ಶಿಕ್ಷಣ ಇಲಾಖೆ ಮಂಗಳೂರು ಅ.29ರಂದು ಸೋಮವಾರ ಮೆಲ್ಕಾರ್ ಮಹಿಳಾ ಪ ಪೂ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿರುವ ಪ ಪೂ ಕಾಲೇಜುಗಳ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಬಿ ಮಹಮ್ಮದ್ ತುಂಬೆ ಅವರು ಮೇಲ್ಕಾರ್ ಕಾಲೇಜಿನ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು, ದೈಹಿಕ,ಮಾನಸಿಕ ಬೆಳವಣಿಗೆಗೆ ಕ್ರೀಡೆ ಪೂರಕವಾಗಿದ್ದು, ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಬಿ ಕೆ ಅಬ್ದುಲ್ ಲತೀಫ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದ ಕ ಜಿಲ್ಲಾ ಕ್ರೀಡಾ ಸಂಯೋಜಕರಾದ ಪ್ರೇಮನಾಥ ಶೆಟ್ಟಿ, ತುಂಬೆ ಪ ಪೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಾಯಿರಾಮ್ ನಾಯಕ್ ಉಪಸ್ಥಿತರಿದ್ದರು. ಮುಹಮ್ಮದ್ ಮುಸ್ತಫ ಸ್ವಾಗತಿಸಿ, ಮುಹಮ್ಮದ್ ಶಿಯಾಬ್ ವಂದಿಸಿ, ಅಬ್ದುಲ್ ಮಜೀದ್ ಅವರು ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದಲ್ಲಿ ಎಸ್ ಎಂ ರಶೀದ್ ಹಾಜಿ ಧ್ವಜಾರೋಹಣಗೈಯಲಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ನಾಗರಾಜಪ್ಪ ಡಿಡಿಪಿಯುಇ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಗ್ರಾ ಪಂ ಅಧ್ಯಕ್ಷರಾದ ಮುಹಮ್ಮದ್ ಷರೀಫ್ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಬಿ ಕೆ ಅಬ್ದುಲ್ ಲತೀಫ್ ವಹಿಸಲಿರುವರು.
Be the first to comment on "ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಪೂರಕ: ಬಿ.ಮಹಮ್ಮದ್ ತುಂಬೆ"