ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಪೂರಕ: ಬಿ.ಮಹಮ್ಮದ್ ತುಂಬೆ

ಮೆಲ್ಕಾರ್ ಮಹಿಳಾ ಪ ಪೂ  ಕಾಲೇಜು ಹಾಗೂ ಪ ಪೂ ಶಿಕ್ಷಣ ಇಲಾಖೆ ಮಂಗಳೂರು ಅ.29ರಂದು ಸೋಮವಾರ ಮೆಲ್ಕಾರ್ ಮಹಿಳಾ ಪ ಪೂ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿರುವ ಪ ಪೂ ಕಾಲೇಜುಗಳ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಬಿ ಮಹಮ್ಮದ್ ತುಂಬೆ ಅವರು ಮೇಲ್ಕಾರ್ ಕಾಲೇಜಿನ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಅವರು, ದೈಹಿಕ,ಮಾನಸಿಕ ಬೆಳವಣಿಗೆಗೆ ಕ್ರೀಡೆ ಪೂರಕವಾಗಿದ್ದು, ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಬಿ ಕೆ ಅಬ್ದುಲ್ ಲತೀಫ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದ ಕ ಜಿಲ್ಲಾ ಕ್ರೀಡಾ ಸಂಯೋಜಕರಾದ  ಪ್ರೇಮನಾಥ ಶೆಟ್ಟಿ, ತುಂಬೆ ಪ ಪೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ  ಸಾಯಿರಾಮ್ ನಾಯಕ್ ಉಪಸ್ಥಿತರಿದ್ದರು. ಮುಹಮ್ಮದ್ ಮುಸ್ತಫ ಸ್ವಾಗತಿಸಿ, ಮುಹಮ್ಮದ್ ಶಿಯಾಬ್ ವಂದಿಸಿ,  ಅಬ್ದುಲ್ ಮಜೀದ್ ಅವರು ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದಲ್ಲಿ ಎಸ್ ಎಂ ರಶೀದ್ ಹಾಜಿ ಧ್ವಜಾರೋಹಣಗೈಯಲಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ  ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ನಾಗರಾಜಪ್ಪ ಡಿಡಿಪಿಯುಇ ತಾಲ್ಲೂಕು ಪಂಚಾಯತ್ ಅಧ್ಯಕ್ಷ  ಚಂದ್ರಹಾಸ ಕರ್ಕೇರ, ತಾಲೂಕು ಪಂಚಾಯತ್ ಉಪಾಧ್ಯಕ್ಷ  ಅಬ್ಬಾಸ್ ಅಲಿ, ಜಿಲ್ಲಾ ಪಂಚಾಯತ್ ಸದಸ್ಯ  ಚಂದ್ರಪ್ರಕಾಶ್ ಶೆಟ್ಟಿ ತುಂಬೆ,  ಗ್ರಾ ಪಂ ಅಧ್ಯಕ್ಷರಾದ ಮುಹಮ್ಮದ್ ಷರೀಫ್ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ  ಬಿ ಕೆ ಅಬ್ದುಲ್ ಲತೀಫ್ ವಹಿಸಲಿರುವರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಪೂರಕ: ಬಿ.ಮಹಮ್ಮದ್ ತುಂಬೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*