ಬಂಟ್ವಾಳ

ತಾಪಂ ಸಂಗಬೆಟ್ಟು ಉಪಚುನಾವಣೆಗೆ ಸಕಲ ಸಿದ್ಧತೆ

ಭಾನುವಾರ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಬಂಟ್ವಾಳ ತಾಲೂಕು ಪಂಚಾಯತ್ ನ ಸಂಗಬೆಟ್ಟು ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮಸ್ಟರಿಂಗ್ ಕಾರ್ಯ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಶನಿವಾರ ನಡೆಯಿತು. ಈ ಸಂದರ್ಭ ತಹಶೀಲ್ದಾರ್ ಪುರಂದರ ಹೆಗ್ಡೆ,ಚಾಲನೆ ನಾವಣಾಧಿಕಾರಿ ನಾರಾಯಣ ಶೆಟ್ಟಿ,ಉಪಚುನಾವಣಾಧಿಕಾರಿ ಲಕ್ಷ್ಮಣ್, ಪುರಸಭೆಯ ಮತ್ತಡಿ,ಚುನಾವಣಾ ಶಾಖೆಯ ರಾಜ್ ಕುಮಾರ್ ಮತ್ತಿತರರು ಹಾಜರಿದ್ದರು.  ಭಾನುವಾರದ ಚುನಾವಣೆಯಲ್ಲಿ ಒಟ್ಟು 4,685 ಪುರುಷರು, 4,768 ಮಹಿಳೆಯರು ಸೇರಿ 9,453 ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಅವಕಾಶ ಪಡೆದಿದ್ದಾರೆ.

ಜಾಹೀರಾತು

ಸಂಗಬೆಟ್ಟು ಕ್ಷೇತ್ರದಲ್ಲಿ ಒಟ್ಟು 10 ಮತಗಟ್ಟೆಗಳಿದ್ದು, ಎರಡು ಸಾಮಾನ್ಯ ಮತಗಟ್ಟೆಗಳಾದರೆ, ಉಳಿದ 8 ಸೂಕ್ಷ್ಮ ಮತಗಟ್ಟೆಗಳಾಗಿವೆ. ಅ. 31 ರಂದು ಬೆಳಿಗ್ಗೆ 8 ಗಂಟೆಯಿಂದ ಮತದಾನ ಎಣಿಕಾ ಕಾರ್ಯವು ಬಂಟ್ವಾಳ ಮಿನಿವಿಧಾನ ಸೌಧದಲ್ಲಿ ನಡೆಯಲಿದೆ.

ಮಸ್ಟರಿಂಗ್ ಕಾರ್ಯ ಸಂದರ್ಭ ಕಂದಾಯ ಇಲಾಖೆ ಮತ್ತು ಚುನಾವಣೆಗೆ ಸಂಬಂಧಿಸಿದ ವಿಭಾಗಗಳಿಗೆ ಒಳಗೊಂಡ ಅಧಿಕಾರಿಗಳು ಉಪಸ್ಥಿತರಿದ್ದು, ವಿವಿಧ ವಾಹನಗಳಲ್ಲಿ ಮತಯಂತ್ರಗಳೊಂದಿಗೆ ಸಂಬಂಧಿತ ಚುನಾವಣಾ ಬೂತ್ ಗಳಿಗೆ ತೆರಳಿದರು.

ಕಾಂಗ್ರೆಸ್ ನಿಂದ ಹಿಂದೆ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಭಾಕರ ಪ್ರಭು ಕಳೆದ ಚುನಾವಣೆಯ ಸಂದರ್ಭ ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ ತಾಪಂ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕಾರಣ ಈ ಚುನಾವಣೆ ನಡೆಯುತ್ತಿದೆ. ಈ ಬಾರಿ ಪ್ರಭಾಕರ ಪ್ರಭು ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್ ನಿಂದ ದಿನೇಶ್ ಸುಂದರ ಶಾಂತಿ ಕಣದಲ್ಲಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

3 hours ago