ಕರ್ನಾಟಕ ಪತ್ರಕರ್ತರ ಸಂಘ (ರಿ) ಬಂಟ್ವಾಳ ತಾಲೂಕು ಇದರ ವತಿಯಿಂದ ಸೈಬರ್ ಕ್ರೈಂ ಹಾಗೂ ಪತ್ರಿಕೋದ್ಯಮ ಮಾಹಿತಿ ಕಾರ್ಯಾಗಾರವು ನವೆಂಬರ್ 5 ರಂದು ಅಪರಾಹ್ನ 1.30 ಕ್ಕೆ ಮಾಣಿ ಕರ್ನಾಟಕ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಸೈಬರ್ ಕ್ರೈಂ ವಿಭಾಗದ ಪೊಲೀಸ್ ನಿರೀಕ್ಷಕ ಸವಿತ್ರ ತೇಜ ಹಾಗೂ ಮಂಗಳೂರು ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜು ಪ್ರಾಧ್ಯಾಪಕ ಜಯಾನಂದ ಪೆರಾಜೆ ಅವರು ಕ್ರಮವಾಗಿ ಸೈಬರ್ ಕ್ರೈಂ ಹಾಗೂ ಪತ್ರಿಕೋದ್ಯಮದ ಬಗ್ಗೆ ಮಾಹಿತಿ ನೀಡುವರು. ಮುಖ್ಯ ಅತಿಥಿಗಳಾಗಿ ಶಾಲಾಡಳಿತ ಮಂಡಳಿ ಅಧ್ಯಕ್ಷ ಕಿರಣ್ ಹೆಗ್ಡೆ ಹಾಗೂ ಕಾಲೇಜು ಪ್ರಾಂಶುಪಾಲ ರವೀಂದ್ರ ಶೆಟ್ಟಿ ಭಾಗವಹಿಸುವರು ಎಂದು ಸಂಘದ ತಾಲೂಕು ಅಧ್ಯಕ್ಷ ಫಾರೂಕ್ ಬಂಟ್ವಾಳ ಹಾಗೂ ಕಾರ್ಯದರ್ಶಿ ವಿ.ಟಿ. ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…