ಬಂಟ್ವಾಳ

ಲೊರೆಟ್ಟೊ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ

ಲೊರೆಟ್ಟೊ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೨೦೧೮೧೯ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕಾರದ ವಂ|ಫಾ ಎಲಿಯಾಸ್ ಡಿಸೋಜಾ ವಹಿಸಿದ್ದರು. ಕ್ರೀಡಾಪಟುಗಳ ಪಥಸಂಚಲನದ ವಂದನೆ ಸ್ವೀಕಾರವನ್ನು ಬಂಟ್ವಾಳ ತಾಲೂಕು ಸಮನ್ವಯಧಿಕಾರಿ ರಾಧಕೃಷ್ಣ ಭಟ್ ಸ್ವೀಕರಿಸಿ ದ್ವಜಾರೋಹಣಗ್ಯೆದು ವಾರ್ಷಿಕ ಕ್ರೀಡಾಕೂಟವು ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಶಾಲೆಯ ಹಂತದಲ್ಲಿ ಗುರುತಿಸುವುದಲ್ಲದೇ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಬೆಳೆಯಲು ಸಾಧ್ಯವಾಗುವುದೆಂದು ಹೇಳಿದರು.

ಜಾಹೀರಾತು

ಭಗಿನಿ ಎಡೋಲಿನ್ ರೊಡ್ರೀಗಸ್ ಕ್ರೀಡಾಜ್ಯೋತಿಯಿಂದ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಸದಸ್ಯೆ ಮಲ್ಲಿಕಾ ಶೆಟ್ಟಿಯವರು ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಲೊರೆಟ್ಟೊ ಆಂಗ್ಲ ಮಾದ್ಯಮ ಶಾಲೆಯ ಮುಖ್ಯೋಪಾದ್ಯಾಯರಾದ ವಂ|ಫಾ ಜೋನ್ಸನ್ ಸಿಕ್ವೇರಾ ಸ್ವಾಗತಿಸಿದರು.

ಬಂಟ್ವಾಳ ವಲಯ ಪ್ರಧಾನ ಧರ್ಮಗುರು ಅತೀ ವಂ ವಾಲ್ಟರ್ ಡಿಮೆಲ್ಲೊ, ಕಾರ್ಮೆಲ್ ಕಾನ್ವೆಂಟ್ ಮೊಡಂಕಾಪು ಶಾಲೆ ಶಿಕ್ಷಕ ರೋಶನ್ ಪಿಂಟೊ ದೈಹಿಕ ಶಿಕ್ಷಣ ಪರಿವೀಕ್ಷಕಿ ರತ್ನಾವತಿ ಲೊರೆಟ್ಟೊ ಅಗ್ರಾರ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಮರ್ಲಿನ್ ಮಾರ್ಟಿಸ್, ಲೊರೆಟ್ಟೋ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ರಿಚ್ಚರ್ಡ್ ಮಿನೇಜಸ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಪ್ರಾ.ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಅಗ್ನೆಸ್ ಅಂದ್ರಾದೆ, ಶಾಲಾ ವಿದ್ಯಾರ್ಥಿ ನಾಯಕ ಕೆವಿನ್ ಮಿನೇಜಸ್, ಶಾಲಾ ಕ್ರೀಡಾ ನಾಯಕ ರೆನ್ವೀಲ್ ಕಾರ್ಲೊ ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪದ್ಮಾನಾಭ ಮಯ್ಯ ವಂದಿಸಿದರು. ಶಾಲಾ ಸಹಮುಖ್ಯೋಪಾದ್ಯಾಯಿನಿ ಅನಿತಾ ಪಾಯ್ಸ್ ಮತ್ತು ಸಹಶಿಕ್ಷಕಿ ಅನುಪಮ ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ