ಕಥೆಗಾರ, ಕಾದಂಬರಿಕಾರ, ನಟ, ನಿರ್ದೇಶಕ, ಪತ್ರಕರ್ತ, ರಾಜಕಾರಣಿಯಾಗಿ ಕನ್ನಡ, ತುಳು ಭಾಷೆಗಳಲ್ಲಿ ಕಲಾಸೇವೆ ಮಾಡಿದ್ದ ಸಾಹಿತಿ ವಿಶುಕುಮಾರ್ ಬದುಕು ಅನುಕರಣೀಯ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಶಂಕರ ಸುವರ್ಣ ಹೇಳಿದರು.
ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿ ಜರುಗಿದ ಯುವವಾಹಿನಿ ಕೇಂದ್ರ ಸಮಿತಿಯ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ವಿಶುಕುಮಾರ್ ವ್ಯಕ್ತಿ ಪರಿಚಯ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲು ಅಧ್ಯಕ್ಷತೆಯನ್ನು ವಹಿಸಿದ್ದರು.
ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕ ಎಸ್.ಆರ್. ಪ್ರದೀಪ್, ಸಲಹೆಗಾರ ಬಿ.ತಮ್ಮಯ, ಅಣ್ಣು ಪೂಜಾರಿ, ಬಂಟ್ವಾಳ ಘಟಕದ ಅಧ್ಯಕ್ಷ ಶಿವಾನಂದ ಎಮ್., ಕಾರ್ಯದರ್ಶಿ ಕಿರಣ್‌ರಾಜ್ ಪೂಂಜರೆಕೋಡಿ, ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸುವರ್ಣ ಅಲೆತ್ತೂರು ಮತ್ತಿತರರು ಉಪಸ್ಥಿತರಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ. ಸ್ವಾಗತಿಸಿದರು. ಯುವಸಿಂಚನ ಪತ್ರಿಕೆಯ ಸಂಪಾದಕ ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…