ಉಪಚುನಾವಣೆಗಳು ನಡೆದ ಜಮಖಂಡಿ, ಬಳ್ಳಾರಿಯಲ್ಲಿ ಕಾಂಗ್ರೆಸ್, ರಾಮನಗರ, ಮಂಡ್ಯದಲ್ಲಿ ಜೆಡಿಎಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಬಿ.ಸಿ.ರೋಡ್ ಫ್ಲೈ ಓವರ್ ಅಡಿಯಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರಾದ ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಶೆಟ್ಟಿ ಮಾಣಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಹಿಳಾ ಬ್ಲಾಕ್ ಪ್ರಮುಖರಾದ ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಕಾಂಗ್ರೆಸ್ ಪ್ರಮುಖರಾದ ಯೂಸುಫ್ ಕರಂದಾಡಿ, ಸಿದ್ದಿಕ್ ಗುಡ್ಡೆಯಂಗಡಿ, ಜೆಡಿಎಸ್ ಪ್ರಮುಖರಾದ ಬಿ.ಮೋಹನ್, ಪಿ.ಎ.ರಹೀಂ, ಹಾರೂನ್ ರಶೀದ್, ಮಹಮ್ಮದ್ ಶಫಿ, ಉಮೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…