ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಸರ್ಕಾರದ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದ್ದು, ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಬಾರದ ರೀತಿಯಲ್ಲಿ ಜಿಲ್ಲೆಯಾದ್ಯಂತ ನ.9ರ ಸಂಜೆ 6 ಗಂಟೆಯಿಂದ ದಿನಾಂಕ ನ.11ರ ಮಧ್ಯರಾತ್ರಿ 12 ಗಂಟೆಯವರೆಗೆ ಯಾವುದೇ ಸಾರ್ವಜನಿಕ ರಾಜಕೀಯ ಮುಂತಾದ ಬಹಿರಂಗ ಸಭೆ ಸಮಾರಂಭ, ಜಾಥಾ ಮತ್ತು ಮೆರವಣಿಗೆಗಳನ್ನು ನಿರ್ಬಂಧಿಸಿ ದಂಡ ಪ್ರಕ್ರಿಯೆ ಸಂಹಿತೆ 144 ರನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ ಎಸ್ ಸಸಿಕಾಂತ್ ಸೆಂಥಿಲ್ ಆದೇಶಿಸಿರುತ್ತಾರೆ.
ಪೊಲೀಸ್ ಕಮಿಷನರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವರದಿಯನ್ನು ಆಧರಿಸಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.
ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿ, ಸಂಘಟನೆಯ ಸದಸ್ಯರು ಯಾವುದೇ ರೀತಿಯ ಪ್ರತಿಭಟನೆ ಮೆರವಣಿಗೆ, ಬ್ಯಾನರ್ಸ್, ಬಂಟಿಂಗ್ಸ್, ಬಾವುಟ, ಧ್ವನಿವರ್ಧಕ ಅಳವಡಿಸಿ ಘೋಷಣೆಗಳನ್ನು ಕೂಗದಂತೆ ಹಾಗೂ ಗುಂಪುಗುಂಪಾಗಿ ಸೇರಿ ಪ್ರತಿಭಟನೆಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಭಾನುವಾರ ಮಧ್ಯರಾತ್ರಿವರೆಗೆ ದ.ಕ.ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ"
Be the first to comment on "ಭಾನುವಾರ ಮಧ್ಯರಾತ್ರಿವರೆಗೆ ದ.ಕ.ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ"